ದೇಶ

ತುಳಸಿ ಗಬ್ಬಾರ್ಡ್​ಗೆ ಮಹಾಕುಂಭ ಮೇಳದ ಗಂಗಾಜಲ ನೀಡಿದ ಪ್ರಧಾನಿ ಮೋದಿ

ಇಂದು ಸಂಜೆ ದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ತುಳಸಿ ಗಬ್ಬಾರ್ಡ್​ ಅವರಿಗೆ ಪ್ರಧಾನಿ ಮೋದಿ ಇತ್ತೀಚೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಿಂದ ಸಂಗ್ರಹಿಸಿದ್ದ ಪವಿತ್ರ ಗಂಗಾಜಲವನ್ನು ನೀಡಿದರು.

ತುಳಸಿ ಗಬ್ಬಾರ್ಡ್​ಗೆ ಮಹಾಕುಂಭ ಮೇಳದ ಗಂಗಾಜಲ ನೀಡಿದ ಪ್ರಧಾನಿ ಮೋದಿ
ತುಳಸಿ ಗಬ್ಬಾರ್ಡ್ - ಪ್ರಧಾನಿ ಮೋದಿ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ ರಾಷ್ಟ್ರ ರಾಜಧಾನಿಯಲ್ಲಿ ಅಮೆರಿಕದ ರಾಷ್ಟ್ರೀಯ ಗುಪ್ತಚರ(ಡಿಎನ್‌ಐ) ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾದರು.

ಇಂದು ಸಂಜೆ ದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ತುಳಸಿ ಗಬ್ಬಾರ್ಡ್​ ಅವರಿಗೆ ಪ್ರಧಾನಿ ಮೋದಿ ಇತ್ತೀಚೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಿಂದ ಸಂಗ್ರಹಿಸಿದ್ದ ಪವಿತ್ರ ಗಂಗಾಜಲವನ್ನು ನೀಡಿದರು.

ತುಳಸಿ ಗಬ್ಬಾರ್ಡ್ ಭೇಟಿಯಾದ ಫೋಟೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಗಬ್ಬಾರ್ಡ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಅಮೆರಿಕ ಮತ್ತು ಭಾರತ ಎರಡೂ ಭಯೋತ್ಪಾದನೆಯನ್ನು ಎದುರಿಸಲು ಮತ್ತು ಕಡಲ ಹಾಗೂ ಸೈಬರ್ ಭದ್ರತಾ ಸಹಕಾರವನ್ನು ಹೆಚ್ಚಿಸಲು ಬದ್ಧವಾಗಿವೆ ಎಂದು ಹೇಳಿದ್ದಾರೆ.

ಗಬ್ಬಾರ್ಡ್ ಅವರು ಮಾರ್ಚ್ 18 ರಂದು ದೆಹಲಿಯಲ್ಲಿ ಭದ್ರತಾ ಅಧಿಕಾರಿಗಳ ಬಹುರಾಷ್ಟ್ರೀಯ ಸಭೆಯಾದ ರೈಸಿನಾ ಸಂವಾದದಲ್ಲಿ ಭಾಗವಹಿಸುವುದರೊಂದಿಗೆ ಅವರ ಎರಡು ದಿನಗಳ ಭಾರತ ಪ್ರವಾಸ ಮುಕ್ತಾಯಗೊಳ್ಳಲಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗಿನ ಚರ್ಚೆಯ ನಂತರ ಗಬ್ಬಾರ್ಡ್ ಅವರು ಪ್ರಧಾನಿ ಮೋದಿ ಅವರರೊಂದಿಗೆ ಸಭೆ ನಡೆಸಿದರು.

ನಿನ್ನೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್‌ಎಸ್‌ಎ) ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದ ತುಳಸಿ ಗಬ್ಬಾರ್ಡ್ ಅವರು ಇಂದು ಬೆಳಗ್ಗೆ ದೆಹಲಿಯಲ್ಲಿ ಆಯೋಜಿಸಿದ್ದ ಜಾಗತಿಕ ಗುಪ್ತಚರ ಮುಖ್ಯಸ್ಥರ ಸಮಾವೇಶದಲ್ಲಿ ಭಾಗವಹಿಸಿದ್ದರು. ನಂತರ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದರು. ಇದೀಗ ಸಂಜೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.