ಸಂಗೀತ ಮಾಂತ್ರಿಕ ಇಳಯರಾಜ ಭೇಟಿಯಾದ ಪ್ರಧಾನಿ ಮೋದಿ!
ಕೆಲವು ದಿನಗಳ ಹಿಂದೆ ಅವರು ಲಂಡನ್‌ನ ಪಾಶ್ಚಿಮಾತ್ಯ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಖ್ಯಾತ ಸಂಗೀತ ಸಂಯೋಜಕ ಇಳಯರಾಜ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯಸಭಾ ಸಂಸದರೂ ಆದ ಇಳಯರಾಜ ಲಂಡನ್‌ನಲ್ಲಿ ರಾಯಲ್ ಪಿಲ್ಹಾರ್ಮೋನಿಕ್ ಆರ್ಕೆಸ್ಟ್ರಾ ತಂಡದೊಂದಿಗೆ ಜಾಗತಿಕವಾಗಿ ಸಂಗೀತ ಮೇಳ ಕಾರ್ಯಕ್ರಮ ಪ್ರದರ್ಶನ ಕೈಗೊಂಡು ಇತಿಹಾಸ ಸೃಷ್ಟಿಸಿದ್ದರು. ಈ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿದ್ದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಮ್ಮ ಸಂಗೀತ ಮತ್ತು ಸಂಸ್ಕೃತಿಯ ಮೇಲೆ ಅದ್ಭುತವಾದ ಪ್ರಭಾವ ಬೀರುವ ಸಂಗೀತದ ದಿಗ್ಗಜ, ರಾಜ್ಯಸಭಾ ಸಂಸದ ಇಳಯರಾಜ ಅವರನ್ನು ಭೇಟಿಯಾದದ್ದು ಸಂತೋಷವಾಗಿದೆ ಎಂದಿದ್ದಾರೆ.
ಕೆಲವು ದಿನಗಳ ಹಿಂದೆ ಅವರು ಲಂಡನ್‌ನ ಪಾಶ್ಚಿಮಾತ್ಯ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ್ದಾರೆ. ಅವರ ಸಂಗೀತ ಸಾಧನೆಯ ಹಾದಿಯಲ್ಲಿ ಇದು ಮತ್ತೊಂದು ಅಧ್ಯಾಯ. ವಿಶ್ವಮಟ್ಟದಲ್ಲೇ ಸದ್ದು ಮಾಡುತ್ತಿದೆ" ಎಂದು ಪ್ರಧಾನಿ ಮೋದಿ ಇಳಯರಾಜ ಭೇಟಿ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.
ಮತ್ತೊಂದೆಡೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಇಳಯರಾಜ, ಇಂದು ಪ್ರಧಾನಿ ಮೋದಿ ಭೇಟಿಯಾಗಿದ್ದು, ನನಗೆ ಭಾರೀ ಸಂತೋಷವನ್ನುಂಟು ಮಾಡಿದೆ. ಲಂಡನ್‌ನಲ್ಲಿ ನಡೆದ ಸಂಗೀತ ಕಾರ್ಯಕ್ರಮ ಸೇರಿದಂತೆ ಬೇರೆ ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


