ದೇಶ

ಬಿಜೆಪಿ ಸಂಸದರಿಗೆ ವಿಪ್ ಜಾರಿ, ನಾಳೆ ಸಂಸತ್ತಿನಲ್ಲಿ ಕಡ್ಡಾಯ ಹಾಜರಿಗೆ ಸೂಚನೆ

ಬಿಜೆಪಿಯ ಎಲ್ಲಾ ಲೋಕಸಭಾ ಸದಸ್ಯರು ದಿನವಿಡೀ ಸದನದಲ್ಲಿ ಸಕಾರಾತ್ಮಕವಾಗಿ ಹಾಜರಿರಬೇಕು ಮತ್ತು ಸರ್ಕಾರದ ನಿಲುವುಗಳನ್ನು ಬೆಂಬಲಿಸಬೇಕು" ಎಂದು ಕೇಸರಿ ಪಕ್ಷ ತನ್ನ ವಿಪ್ ನಲ್ಲಿ ತಿಳಿಸಿದೆ.

ಬಿಜೆಪಿ ಸಂಸದರಿಗೆ ವಿಪ್ ಜಾರಿ, ನಾಳೆ ಸಂಸತ್ತಿನಲ್ಲಿ ಕಡ್ಡಾಯ ಹಾಜರಿಗೆ ಸೂಚನೆ
ಲೋಕಸಭೆ
Published On :

ನವದೆಹಲಿ: ಭಾರತೀಯ ಜನತಾ ಪಕ್ಷ ಗುರುವಾರ ತನ್ನ ಎಲ್ಲಾ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದ್ದು, 2025-26ರ ಕೇಂದ್ರ ಬಜೆಟ್ ಅಂಗೀಕಾರಕ್ಕಾಗಿ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದೆ.

ಬಿಜೆಪಿಯ ಎಲ್ಲಾ ಲೋಕಸಭಾ ಸದಸ್ಯರು ದಿನವಿಡೀ ಸದನದಲ್ಲಿ ಸಕಾರಾತ್ಮಕವಾಗಿ ಹಾಜರಿರಬೇಕು ಮತ್ತು ಸರ್ಕಾರದ ನಿಲುವುಗಳನ್ನು ಬೆಂಬಲಿಸಬೇಕು" ಎಂದು ಕೇಸರಿ ಪಕ್ಷ ತನ್ನ ವಿಪ್ ನಲ್ಲಿ ತಿಳಿಸಿದೆ.

ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದ್ದರು.

ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳ ಸಂಸದರು ಇಂದು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಟೀ ಶರ್ಟ್‌ಗಳನ್ನು ಧರಿಸಿ ಪ್ರತಿಭಟನೆ ನಡೆಸಿದ್ದರಿಂದ ತೀವ್ರ ಗದ್ದಲ ಹಾಗೂ ಕೋಲಾಹಲ ಏರ್ಪಟ್ಟು ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.