ಛತ್ತೀಸಗಢ: ಗರಿಯಾಬಂದ್‌ನ ನಕ್ಸಲರ ಶಿಬಿರದಿಂದ 8 ಲಕ್ಷ ರೂ ನಗದು, ಸ್ಫೋಟಕ ವಶ
ವಶಪಡಿಸಿಕೊಂಡ ವಸ್ತುಗಳಲ್ಲಿ 8 ಲಕ್ಷ ರೂ. ನಗದು, 13 ಜೆಲೆಟಿನ್ ಸ್ಟಿಕ್‌ಗಳು, ಮಾವೋವಾದಿ ಬ್ಯಾನರ್‌ಗಳು, ಡೈರಿ ಮತ್ತು ಸಾಹಿತ್ಯ ಸೇರಿವೆ. ಇವುಗಳನ್ನು ಬಿಳಿ ಚೀಲದಲ್ಲಿ ಪ್ಯಾಕ್ ಮಾಡಿ ಮರದ ಕೆಳಗೆ ನೆಲದಲ್ಲಿ ಅಡಗಿಸಿ ಇಡಲಾಗಿತ್ತು.

ಗರಿಯಾಬಂದ್: ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ಮಾವೋವಾದಿಗಳ ಅಡಗುತಾಣದಿಂದ ಭದ್ರತಾ ಪಡೆಗಳು 8 ಲಕ್ಷ ರೂ. ನಗದು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಂಡ್ರಿಪಾನಿ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಗುರುವಾರ ಈ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗರಿಯಾಬಂದ್ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ರಾಖೇಚಾ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ನಕ್ಸಲರ ಶಿಬಿರ ಇರುವ ಬಗ್ಗೆ ಲಭ್ಯವಾದ ಮಾಹಿತಿ ಆಧಾರದ ಮೇಲೆ ಪ್ರಾರಂಭಿಸಲಾದ ಕಾರ್ಯಾಚರಣೆಯಲ್ಲಿ ವಿಶೇಷ ಕಾರ್ಯಪಡೆ (STF), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಹಾಗೂ ಅದರ ಗಣ್ಯ ಘಟಕವಾದ CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಮತ್ತು ಜಿಲ್ಲಾ ಪಡೆಗೆ ಸೇರಿದ ಸಿಬ್ಬಂದಿ ಪಾಲ್ಗೊಂಡಿದ್ದರು ಎಂದು ಹೇಳಿದರು.
'ವಶಪಡಿಸಿಕೊಂಡ ವಸ್ತುಗಳಲ್ಲಿ 8 ಲಕ್ಷ ರೂ. ನಗದು, 13 ಜೆಲೆಟಿನ್ ಸ್ಟಿಕ್‌ಗಳು, ಮಾವೋವಾದಿ ಬ್ಯಾನರ್‌ಗಳು, ಡೈರಿ ಮತ್ತು ಸಾಹಿತ್ಯ ಸೇರಿವೆ. ಇವುಗಳನ್ನು ಬಿಳಿ ಚೀಲದಲ್ಲಿ ಪ್ಯಾಕ್ ಮಾಡಿ ಮರದ ಕೆಳಗೆ ನೆಲದಲ್ಲಿ ಅಡಗಿಸಿ ಇಡಲಾಗಿತ್ತು. ನಕ್ಸಲರು ಸ್ಥಳೀಯ ಗ್ರಾಮಸ್ಥರು ಮತ್ತು ಉದ್ಯಮಿಗಳಿಂದ ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ' ಎಂದು ಎಸ್ಪಿ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



