ದೇಶ

ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ವಿಂಗಡಣೆ ಮಾಡಿದರೆ ದಕ್ಷಿಣ ಭಾರತ ರಾಜಕೀಯ ಧ್ವನಿ ಕಳೆದುಕೊಳ್ಳಲಿದೆ: ತೆಲಂಗಾಣ ಸಿಎಂ

ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಬಾರದು. ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಸೀಟುಗಳನ್ನು ಹೆಚ್ಚಿಸದೆ ಕ್ಷೇತ್ರ ಪುನರ್ವಿಂಗಡಣೆ ಜಾರಿಗೆ ತಂದಿದ್ದರು.

ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ವಿಂಗಡಣೆ ಮಾಡಿದರೆ ದಕ್ಷಿಣ ಭಾರತ ರಾಜಕೀಯ ಧ್ವನಿ ಕಳೆದುಕೊಳ್ಳಲಿದೆ: ತೆಲಂಗಾಣ ಸಿಎಂ
Published On :

ಚೆನ್ನೈ: ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಿದರೆ ದಕ್ಷಿಣ ಭಾರತವು ರಾಜಕೀಯ ಧ್ವನಿ ಕಳೆದುಕೊಳ್ಳುತ್ತದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಶನಿವಾರ ಹೇಳಿದ್ದಾರೆ.

ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆದಿದ್ದ ಲೋಕಸಭಾ ಕ್ಷೇತ್ರಗಳ ವಿಂಗಡಣೆಯ ಕುರಿತ ಸಭೆಯನ್ನುದ್ದೇಶಿಸಿ ಮಾತನಾಡಿದ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ದಕ್ಷಿಣದ ನಾಯಕರು, ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ವಿಂಗಡಣೆ ಕ್ರಮವನ್ನು ವಿರೋಧಿಸಬೇಕು ಕರೆ ನೀಡಿದರು.

ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಜಾರಿಗೆ ತಂದರೆ "ಉತ್ತರ ಪ್ರದೇಶವು ನಮ್ಮನ್ನು ದ್ವಿತೀಯ ನಾಗರಿಕರನ್ನಾಗಿ ಮಾಡುತ್ತದೆ" ಎಂದು ಹೇಳಿದರು.

"... ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ವಿಂಗಡಣೆಯನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಏಕೆಂದರೆ ಯುಪಿ, ಬಿಹಾರ, ಮಧ್ಯ ಪ್ರದೇಶ ರಾಜಸ್ಥಾನದಂತಹ ರಾಜ್ಯಗಳು ದೇಶದ ಉಳಿದ ಭಾಗಗಳಲ್ಲಿಯೇ ಹೆಚ್ಚು ಪ್ರಾಬಲ್ಯ ಸಾಧಿಸುತ್ತವೆ. ನಾವು ಅದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ" ಎಂದರು.

ಬಿಜೆಪಿ 'ಜನಸಂಖ್ಯಾ ದಂಡ' ನೀತಿಯನ್ನು ಜಾರಿಗೆ ತರುತ್ತಿದೆ ಎಂದು ಆರೋಪಿಸಿದ ತೆಲಂಗಾಣ ಸಿಎಂ, ತೆಲಂಗಾಣ ಮತ್ತು ಇತರ ರಾಜ್ಯಗಳು ದೇಶದ ಏಕತೆಯನ್ನು ಗೌರವಿಸುತ್ತವೆಯಾದರೂ, ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ವಿಂಗಡಣೆಯನ್ನು ಒಪ್ಪಿಕೊಳ್ಳುವುದಿಲ್ಲ" ಎಂದರು.

ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಬಾರದು. ಆದರೆ ರಾಜ್ಯಗಳೊಳಗೆ ಕ್ಷೇತ್ರ ವಿಂಗಡಣೆ ಮಾಡಬೇಕು. ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಸೀಟುಗಳನ್ನು ಹೆಚ್ಚಿಸದೆ ಕ್ಷೇತ್ರ ಪುನರ್ವಿಂಗಡಣೆ ಜಾರಿಗೆ ತಂದಿದ್ದರು. ಏಕೆಂದರೆ ಇದು ರಾಜ್ಯಗಳ ನಡುವೆ ರಾಜಕೀಯ ಅಧಿಕಾರದ ಅಸಮತೋಲನವನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.