ದೇಶ

ಜಮ್ಮು-ಕಾಶ್ಮೀರ ಅರಣ್ಯದಲ್ಲಿ ನುಸುಳುಕೋರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

ಸ್ಥಳಕ್ಕೆ ಸೇನಾ ಪಡೆಗಳನ್ನು ರವಾನಿಸಲಾಗಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಮ್ಮು-ಕಾಶ್ಮೀರ ಅರಣ್ಯದಲ್ಲಿ ನುಸುಳುಕೋರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ
ಜಮ್ಮು-ಕಾಶ್ಮೀರ (ಸಂಗ್ರಹ ಚಿತ್ರ) — online desk
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಅರಣ್ಯ ಪ್ರದೇಶದಿಂದ ನುಸುಳಲು ನುಸುಳುಕೋರರು ಯತ್ನಿಸಿದ್ದು, ಭದ್ರತಾ ಪಡೆಗಳು- ನುಸುಳುಕೋರರ ನಡಿವೆ ಗುಂಡಿನ ಚಕಮಕಿ ನಡೆದಿದೆ.

ಹಿರಾನಗರ ವಲಯದ ಅಂತರರಾಷ್ಟ್ರೀಯ ಗಡಿಯ ಬಳಿಯ ಸನ್ಯಾಲ್ ಗ್ರಾಮದಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಸೇನಾ ಪಡೆಗಳನ್ನು ರವಾನಿಸಲಾಗಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಮ್ಮುವಿನಲ್ಲಿ ಇತ್ತೀಚೆಗೆ ಭಯೋತ್ಪಾದಕರ ಸರಣಿ ಒಳನುಸುಳುವಿಕೆ ನಡೆಯುತ್ತಿದೆ. ಮಾರ್ಚ್ 17 ರಂದು, ಕುಪ್ವಾರಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದು, ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ಸಾವನ್ನಪ್ಪಿದ್ದಾನೆ.

ಇತ್ತೀಚೆಗೆ, ಕಥುವಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮೂವರು ಅಮಾಯಕ ನಾಗರಿಕರನ್ನು ಕೊಂದರು. ಅವರಲ್ಲಿ ಒಬ್ಬ 14 ವರ್ಷದ ಬಾಲಕನೂ ಇದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.