ಜಮ್ಮು-ಕಾಶ್ಮೀರ: ದೋಡಾ ಜಿಲ್ಲೆಯಲ್ಲಿ ಉಗ್ರರ ಅಡಗುದಾಣ ಪತ್ತೆ; ಶಸ್ತ್ರಾಸ್ತ್ರಗಳು ವಶಕ್ಕೆ
ಅನುಮಾನಾಸ್ಪದ ಚಲನವಲನಗಳ ವರದಿಗಳ ಹಾಗೂ ಗುಪ್ತಚರ ಮಾಹಿತಿಯ ಮೇರೆಗೆ ಭದೇರ್ವಾದ ಭಲ್ರಾ ಅರಣ್ಯ ಪ್ರದೇಶದಲ್ಲಿ ಸ್ಥಳೀಯ ಪೊಲೀಸರು ಮತ್ತು ಸೇನೆ ವಿಶೇಷ ಕಾರ್ಯಾಚರಣೆ ಗುಂಪು(ಎಸ್‌ಒಜಿ) ಕಾರ್ಯಾಚರಣೆಗಿಳಿದಿತ್ತು.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭಾರೀ ಕಾರ್ಯಾಚರಣೆ ನಡೆಸಿದ್ದು, ದೋಡಾ ಜಿಲ್ಲೆಯಲ್ಲಿ ಉಗ್ರರ ಬೃಹತ್ ಅಡಗುದಾಣವನ್ನು ಧ್ವಂಸ ಮಾಡಿ, ಅಲ್ಲಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದೆ.
ಅನುಮಾನಾಸ್ಪದ ಚಲನವಲನಗಳ ವರದಿಗಳ ಹಾಗೂ ಗುಪ್ತಚರ ಮಾಹಿತಿಯ ಮೇರೆಗೆ ಭದೇರ್ವಾದ ಭಲ್ರಾ ಅರಣ್ಯ ಪ್ರದೇಶದಲ್ಲಿ ಸ್ಥಳೀಯ ಪೊಲೀಸರು ಮತ್ತು ಸೇನೆ ವಿಶೇಷ ಕಾರ್ಯಾಚರಣೆ ಗುಂಪು(ಎಸ್‌ಒಜಿ) ಕಾರ್ಯಾಚರಣೆಗಿಳಿದಿತ್ತು.
ಶೋದ ಕಾರ್ಯಾಚರಣೆ ವೇಳೆ ಉಗ್ರರ ಅಡಗುದಾಣ ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಯಾರನ್ನು ಬಂಧನಕ್ಕೊಳಪಡಿಸಿಲ್ಲ. ಆದರೆ, ಸ್ಫೋಟಕ ವಸ್ತು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಪಕ್ಕದ ಕಿಶ್ತ್‌ವಾರ್ ಜಿಲ್ಲೆಯ ಗುರಿನಾಲ್, ಥಾಥ್ರಿ ಮತ್ತು ಚತ್ರೂ ಅರಣ್ಯದಲ್ಲಿ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



