ಕಂತೆ ಕಂತೆ ಹಣ ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ಹೈಕೋರ್ಟ್ ಆದೇಶ
ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಂಜೀವ್ ಖನ್ನಾ ಅವರು ಶನಿವಾರ ಮೂವರು ಸದಸ್ಯರ ಆಂತರಿಕ ತನಿಖಾ ಸಮಿತಿಯನ್ನು ರಚಿಸಿದರು.

ನವದೆಹಲಿ: ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನ್ಯಾಯಾಂಗ ಕೆಲಸವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ನೋಟಿಸ್‌ನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಆದಾಗ್ಯೂ, ಈ ನಿರ್ಧಾರವನ್ನು ಏಕೆ ತೆಗೆದುಕೊಳ್ಳಲಾಗಿದೆ ಎಂಬುದು ಈ ಸೂಚನೆಯಲ್ಲಿ ಸ್ಪಷ್ಟವಾಗಿಲ್ಲ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI) ಸಂಜೀವ್ ಖನ್ನಾ ಅವರ ನಿರ್ದೇಶನದ ನಂತರ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆ) ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಾಸ್ತವವಾಗಿ, ಸಂಜೀವ್ ಖನ್ನಾ ಅವರು ಈ ಘಟನೆ ಸಂಬಂಧ ಒಂದು ನಿರ್ಧಾರ ತೆಗೆದುಕೊಳ್ಳುವವರೆಗೂ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಯಾವುದೇ ನ್ಯಾಯಾಂಗ ಕೆಲಸವನ್ನು ನಿಯೋಜಿಸಬೇಡಿ ಎಂದು ದೆಹಲಿ ಹೈಕೋರ್ಟ್‌ಗೆ ನಿರ್ದೇಶನ ನೀಡಿದ್ದರು.
ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಂಜೀವ್ ಖನ್ನಾ ಅವರು ಶನಿವಾರ ಮೂವರು ಸದಸ್ಯರ ಆಂತರಿಕ ತನಿಖಾ ಸಮಿತಿಯನ್ನು ರಚಿಸಿದರು. ಸಮಿತಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶೆ ಅನು ಶಿವರಾಮನ್ ಇದ್ದಾರೆ.
ನ್ಯಾಯಮೂರ್ತಿ ಯಶವಂತ್ ವರ್ಮಾ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿದ್ದು ಈ ಹಣವು ತಮಗೆ ಅಥವಾ ತಮ್ಮ ಕುಟುಂಬದ ಸದಸ್ಯರಿಗೆ ಸೇರಿಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



