ದೇಶ

ಆಕ್ರಮಿತ ಕಾಶ್ಮೀರವನ್ನು ಕೂಡಲೇ ತೆರವುಗೊಳಿಸಲೇಬೇಕು: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತರಾಟೆ!

ಜಮ್ಮು ಮತ್ತು ಕಾಶ್ಮೀರವು ಹಿಂದೆ, ಇಂದು ಮತ್ತು ನಾಳೆ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿರುತ್ತದೆ ಎಂದು ಹರೀಶ್ ಹೇಳಿದ್ದಾರೆ.

ಆಕ್ರಮಿತ ಕಾಶ್ಮೀರವನ್ನು ಕೂಡಲೇ ತೆರವುಗೊಳಿಸಲೇಬೇಕು: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತರಾಟೆ!
ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್
Published On :

ನವದೆಹಲಿ: ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಭಾರತ ವಿಶ್ವಸಂಸ್ಥೆಯಲ್ಲಿ ಖಂಡಿಸಿದೆ. ಕೂಡಲೇ ಪಾಕ್ ಆಕ್ರಮಿತ ಕಾಶ್ಮಿರವನ್ನು ತೆರವುಗೊಳಿಸಲೇಬೇಕು ಎಂದು ಹೇಳಿದೆ.

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ವಿಶ್ವಸಂಸ್ಥೆಯ ಶಾಂತಿ ಕಾರ್ಯಾಚರಣೆಗಳಲ್ಲಿ ಹೊಂದಾಣಿಕೆಯನ್ನು ಹೆಚ್ಚಿಸುವ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯಲ್ಲಿ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರವು ಹಿಂದೆ, ಇಂದು ಮತ್ತು ನಾಳೆ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿರುತ್ತದೆ. ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ, ಅದನ್ನು ತೆರವುಗೊಳಿಸಲೇಬೇಕು ಎಂದು ಹರೀಶ್ ಹೇಳಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಕೆಣಕಿದ ನಂತರ ಹರೀಶ್ ಅವರ ಬಲವಾದ ಪ್ರತಿಕ್ರಿಯೆ ಬಂದಿದೆ. ಪಾಕಿಸ್ತಾನದ ಪ್ರತಿನಿಧಿಯು ಭಾರತದ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೇಲೆ ಅನಗತ್ಯ ಹೇಳಿಕೆಗಳನ್ನು ನೀಡಿರುವುದನ್ನು ಭಾರತ ಗಮನಿಸಬೇಕಾಗಿದೆ ಎಂದು ಹರೀಶ್ ಹೇಳಿದ್ದಾರೆ.

ಇಂತಹ ಪುನರಾವರ್ತಿತ ಉಲ್ಲೇಖಗಳು ಅವರ ಕಾನೂನುಬಾಹಿರ ಹಕ್ಕುಗಳನ್ನು ದೃಢೀಕರಿಸುವುದಿಲ್ಲ ಅಥವಾ ಅವರ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ. ತಮ್ಮ ಸಂಕುಚಿತ ಮತ್ತು ವಿಭಜಕ ಕಾರ್ಯಸೂಚಿಯನ್ನು ಸಾಧಿಸಲು ಈ ವೇದಿಕೆಯ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬೇಡಿ ಎಂದು ನಾವು ಪಾಕಿಸ್ತಾನಕ್ಕೆ ಸಲಹೆ ನೀಡುತ್ತೇವೆ ಎಂದಿದ್ದಾರೆ.

ಆಗಸ್ಟ್ 5, 2019 ರಂದು ಭಾರತವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಹದಗೆಟ್ಟವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.