ತೆಲಂಗಾಣ ಸುರಂಗ ಮಾರ್ಗ ಕುಸಿತ: ಮತ್ತೊಂದು ಮೃತದೇಹ ಹೊರಕ್ಕೆ; 32ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
ಕಳೆದ ಫೆಬ್ರವರಿ 22 ರಂದು ಎಂಟು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸುರಂಗದೊಳಗೆ ಸಿಲುಕಿಹಾಕಿಕೊಂಡಿದ್ದರು. ಅವರಿಗಾಗಿ ಒಂದು ತಿಂಗಳಿಗೂ ಹೆಚ್ಚು ಕಾಲ ಹುಡುಕಾಟ ನಡೆಸಲಾಗಿತ್ತು.

ಹೈದರಾಬಾದ್: ಶ್ರೀಶೈಲಂ ಎಡದಂಡೆ ಕಾಲುವೆ (SLBC) ಸುರಂಗದೊಳಗೆ ಇಂದು ಮಂಗಳವಾರ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಕಾರ್ಮಿಕರು ನಿರ್ವಹಣಾ ಕೆಲಸ ಮಾಡುತ್ತಿದ್ದ ಕನ್ವೇಯರ್ ಬೆಲ್ಟ್‌ನಿಂದ 50 ಮೀಟರ್ ದೂರದಲ್ಲಿ ಶವ ಪತ್ತೆಯಾಗಿದ್ದು, ಶವದ ಗುರುತು ಪತ್ತೆ ಆಗಿಲ್ಲ.
ಕಳೆದ ಫೆಬ್ರವರಿ 22 ರಂದು ಎಂಟು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸುರಂಗದೊಳಗೆ ಸಿಲುಕಿಹಾಕಿಕೊಂಡಿದ್ದರು. ಅವರಿಗಾಗಿ ಒಂದು ತಿಂಗಳಿಗೂ ಹೆಚ್ಚು ಕಾಲ ಹುಡುಕಾಟ ನಡೆಸಲಾಗಿತ್ತು. ಕಾರ್ಮಿಕರಲ್ಲಿ ಒಬ್ಬರಾದ ಗುರುಪ್ರೀತ್ ಸಿಂಗ್ ಎಂಬುವವರ ಶವವನ್ನು ಮಾರ್ಚ್ 9 ರಂದು ಹೊರತೆಗೆಯಲಾಗಿತ್ತು. ನಂತರ ರಕ್ಷಣಾ ಪ್ರಯತ್ನಗಳು ಮುಂದುವರಿದಿದ್ದರೂ ಉಳಿದ ಆರು ಕಾರ್ಮಿಕರ ಭವಿಷ್ಯ ಅನಿಶ್ಚಿತವಾಗಿದೆ.
ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ತಂಡಗಳು ದಣಿವರಿಯಿಲ್ಲದೆ ಕೆಲಸ ಮಾಡುತ್ತಿರುವಾಗ ರಕ್ಷಣಾ ಕಾರ್ಯಾಚರಣೆಗಳು ಈಗ 32 ನೇ ದಿನಕ್ಕೆ ಕಾಲಿಟ್ಟಿದೆ. ಹೊಸದಾಗಿ ಪತ್ತೆಯಾಗಿರುವ ಮೃತದೇಹವನ್ನು ಗುರುತಿಸುವ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದು, ಹೆಚ್ಚಿನ ವಿವರಗಳನ್ನು ನೀಡಿಲ್ಲ.
ಮುಂದಿನ ದಿನಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರಗತಿ ಸಾಧಿಸುವ ಭರವಸೆಯನ್ನು ಅಧಿಕಾರಿಗಳು ಹೊಂದಿದ್ದಾರೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಎಸ್ ಸಿಸಿಎಲ್, ಅನ್ವಿ ರೊಬೊಟಿಕ್ಸ್ ಮತ್ತು ಇತರ ತಂಡಗಳು ಸೇರಿದಂತೆ ಬಹು ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



