ಸೋನಿಯಾ ಗಾಂಧಿ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಕಾಂಗ್ರೆಸ್!
ಸಭಾಪತಿ ಜಗದೀಪ್ ಧಂಖರ್ ಗೆ ನೋಟಿಸ್ ಸಲ್ಲಿಸಿರುವ ರಮೇಶ್, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿರುವ ಅಮಿತ್ ಶಾ ವಿರುದ್ಧ ನಿಯಮ188ರ ಅಡಿಯಲ್ಲಿ ಹಕ್ಕುಚ್ಯುತಿ ಮಂಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮುಖ್ಯ ಸಚೇತಕ ಜೈರಾಂ ರಮೇಶ್ ಅವರು ಬುಧವಾರ ಮೇಲ್ಮನೆಯಲ್ಲಿ ಮಸೂದೆಗೆ ಉತ್ತರ ನೀಡುವ ಸಂದರ್ಭದಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.
ಸಭಾಪತಿ ಜಗದೀಪ್ ಧಂಖರ್ ಗೆ ನೋಟಿಸ್ ಸಲ್ಲಿಸಿರುವ ರಮೇಶ್, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿರುವ ಅಮಿತ್ ಶಾ ವಿರುದ್ಧ ನಿಯಮ188ರ ಅಡಿಯಲ್ಲಿ ಹಕ್ಕುಚ್ಯುತಿ ಮಂಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಮಾರ್ಚ್ 25 ರಂದು ವಿಪತ್ತು ನಿರ್ವಹಣಾ ಮಸೂದೆ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಆಡಳಿತದಲ್ಲಿ ಪಿಎಂ ಪರಿಹಾರ ನಿಧಿಯನ್ನು ಸ್ಥಾಪಿಸಲಾಗಿತ್ತು. ನರೇಂದ್ರ ಮೋದಿ ಅವರ ಅಧಿಕಾರಾವಧಿಯಲ್ಲಿ ಪಿಎಂ ಕೇರ್ಸ್ ಸ್ಥಾಪಿಸಲಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಕೇವಲ ಒಂದು ಕುಟುಂಬದ ನಿಯಂತ್ರಣದಲ್ಲಿತ್ತು. ಕಾಂಗ್ರೆಸ್ ಅಧ್ಯಕ್ಷರು ಅದರ ಸದಸ್ಯರಾಗಿದ್ದರು. ಕಾಂಗ್ರೆಸ್ ಅಧ್ಯಕ್ಷರು ಸರ್ಕಾರದ ನಿಧಿಯ ಭಾಗವಾಗಿದ್ದರು. ಅವರು ಸರ್ಕಾರಕ್ಕೆ ಎನು ಉತ್ತರಿಸುತ್ತಾರೆ ಎಂದು ಶಾ ಹೇಳಿದ್ದರು.
ಗೃಹ ಸಚಿವರು ಸೋನಿಯಾ ಗಾಂಧಿಯವರ ಹೆಸರನ್ನು ತೆಗೆದುಕೊಳ್ಳದಿದ್ದರೂ ರಾಷ್ಟ್ರೀಯ ಪ್ರಧಾನ ಮಂತ್ರಿಗಳ ಪರಿಹಾರ ನಿಧಿ (ಎನ್‌ಪಿಎಂಆರ್‌ಎಫ್) ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ನಿರ್ದಿಷ್ಟವಾಗಿ ಸೋನಿಯಾ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ. ಸದನದ ಯಾವುದೇ ಸದಸ್ಯರನ್ನು ಪ್ರತಿಬಿಂಬಿಸುವುದು ಅಥವಾ ಅವಹೇಳನಕಾರಿ ಮಾತುಗಳನ್ನಾಡುವುದು ಹಕ್ಕುಚ್ಯುತಿಯಾಗಲಿದೆ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
ಸೋನಿಯಾ ಗಾಂಧಿ ಅವರ ಪ್ರತಿಷ್ಠೆ ಹಾಳು ಮಾಡುವ ಪೂರ್ವಯೋಜಿತ ಉದ್ದೇಶದಿಂದ ಅವರ ವಿರುದ್ಧ ಗೃಹ ಸಚಿವರು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಅವರ ಹೇಳಿಕೆಯು ಸುಳ್ಳಾಗಿದ್ದು, ಮಾನಹಾನಿಕರವಾಗಿದೆ. ಇದು ಸೋನಿಯಾ ಗಾಂಧಿಯವರ ವಿಶೇಷಾಧಿಕಾರವನ್ನು ಉಲ್ಲಂಘಿಸಿದಂತಿದೆ. ಹೀಗಾಗಿ ಅವರ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆ ಆರಂಭಿಸಬಹುದು ಎಂದು ಜೈರಾಂ ರಮೇಶ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



