ಜಮ್ಮು-ಕಾಶ್ಮೀರ: ಬರಾಮುಲ್ಲಾದಲ್ಲಿ ಉಗ್ರರ ಅಡಗುತಾಣ ಪತ್ತೆ, ಭಾರಿ ಪ್ರಮಾಣದ ಸ್ಫೋಟಕ ವಶ
ನಾಂಬ್ಲಾನ್ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವನ್ನು ಪತ್ತೆಹಚ್ಚಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಕ್ಕೆ ಪಡೆಯಲಾಗಿದೆ

ಬರಾಮುಲ್ಲಾ: ಜಮ್ಮು- ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಬುಧವಾರ ಉಗ್ರರ ಅಡಗುತಾಣಗಳನ್ನು ಪತ್ತೆ ಹಚ್ಚಿವೆ.
ನಾಂಬ್ಲಾನ್ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವನ್ನು ಪತ್ತೆಹಚ್ಚಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆಯಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಸಂಗ್ರಹವನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.
ಇದರಲ್ಲಿ ಫ್ಯೂಸ್, ಪ್ಲಾಸ್ಟಿಕ್ ಸ್ಫೋಟಕಗಳು, 104 ಸುತ್ತುಗಳ ಎಕೆ -47 ಮದ್ದುಗುಂಡುಗಳು, ಎರಡು ಎಕೆ -47 ಮ್ಯಾಗಜೀನ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು, ಒಂದು ಚೀಲ ಮತ್ತು ಎರಡು ಬ್ಯಾಗ್‌ಗಳು ಸೇರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



