ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಈ ನಿರ್ಣಯವನ್ನು ಬೆಂಬಲಿಸಿದವು.

ಚೆನ್ನೈ: ಕೇಂದ್ರ ಸರ್ಕಾರ 2024ರ ವಕ್ಫ್(ತಿದ್ದುಪಡಿ) ಮಸೂದೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ಗುರುವಾರ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.
ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಈ ನಿರ್ಣಯವನ್ನು ಬೆಂಬಲಿಸಿದವು. ಆದರೆ ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್ ಅವರು ತಮ್ಮ ಪಕ್ಷದ ಶಾಸಕರ ನೇತೃತ್ವದಲ್ಲಿ ನಿರ್ಣಯವನ್ನು ವಿರೋಧಿಸಿ ಸಭಾತ್ಯಾಗ ಮಾಡಿದರು.
ಈ ಮಸೂದೆಯು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.
"ಭಾರತದಲ್ಲಿ ಎಲ್ಲಾ ಧರ್ಮಗಳ ಜನರು ಸಾಮರಸ್ಯದಿಂದ ಬದುಕುತ್ತಿದ್ದಾರೆ ಮತ್ತು ಸಂವಿಧಾನವು ಜನರಿಗೆ ತಮ್ಮ ಧರ್ಮಗಳನ್ನು ಆಚರಿಸುವ ಹಕ್ಕುಗಳನ್ನು ನೀಡಿದೆ. ಜನಪ್ರಿಯ ಸರ್ಕಾರಗಳು ಈ ಹಕ್ಕನ್ನು ಉಳಿಸಿಕೊಳ್ಳುವ ಕರ್ತವ್ಯ ಹೊಂದಿವೆ. ಆದಾಗ್ಯೂ, ಇದಕ್ಕೆ ವಿರುದ್ಧವಾಗಿ, ಕೇಂದ್ರ ಸರ್ಕಾರವು ಕಳೆದ ಆಗಸ್ಟ್‌ನಲ್ಲಿ 2024 ರ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಚಯಿಸಿತು. ಇದು ಮುಸ್ಲಿಂ ಸಮುದಾಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಹೀಗಾಗಿ, ಈ ಮಸೂದೆಯನ್ನು ಸಂಪೂರ್ಣವಾಗಿ ಹಿಂಪಡೆಯುವಂತೆ ಈ ಸದನವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ" ಎಂದು ಸಿಎಂ ಮಂಡಿಸಿದ ನಿರ್ಣಯದಲ್ಲಿ ಹೇಳಲಾಗಿದೆ.
ಮಸೂದೆಯಲ್ಲಿ ಪ್ರಸ್ತಾಪಿಸಲಾದ ತಿದ್ದುಪಡಿಗಳು ವಕ್ಫ್‌ಗಳ ಆಡಳಿತದಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪವನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದ ಸ್ಟಾಲಿನ್, "ತಮಿಳುನಾಡು ಸರ್ಕಾರವು ಸೆಪ್ಟೆಂಬರ್ 30, 2024 ರಂದು ಜೆಪಿಸಿಗೆ ಇದನ್ನು ತಿಳಿಸಿರುವುದಾಗಿ ಹೇಳಿದ್ದಾರೆ.
ಡಿಎಂಕೆ ಮಾತ್ರವಲ್ಲದೆ ಅನೇಕ ಪ್ರಮುಖ ರಾಜಕೀಯ ಪಕ್ಷಗಳು ಸಹ ತಿದ್ದುಪಡಿ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ತಮ್ಮ ಪ್ರತಿಭಟನೆಯನ್ನು ದಾಖಲಿಸಿವೆ" ಎಂದು ಸ್ಟಾಲಿನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



