ಏಪ್ರಿಲ್-ಜೂನ್ ನಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಅಧಿಕ ಬಿಸಿಲು: IMD ಮುನ್ನೆಚ್ಚರಿಕೆ
ವಾಯವ್ಯ ಭಾರತದ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಬಿಸಿಗಾಳಿ ಎರಡು ಪಟ್ಟು ಹೆಚ್ಚಾಗಿರುತ್ತದೆ ಎಂದು ಐಎಂಡಿ ಅಧಿಕಾರಿಯೊಬ್ಬರು ಈ ಹಿಂದೆಯೇ ಹೇಳಿದ್ದರು.

ನವದೆಹಲಿ: ಏಪ್ರಿಲ್-ಜೂನ್ ನಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಅಧಿಕ ಬಿಸಿಲು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಪಶ್ಚಿಮ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರಲಿದೆ ಎಂದು ನಿರೀಕ್ಷಿಸಿದೆ.
ಬಹುತೇಕ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಏಪ್ರಿಲ್‌ನಿಂದ ಜೂನ್‌ವರೆಗೆ ಉತ್ತರ ಮತ್ತು ಪೂರ್ವ ಭಾರತ, ಮಧ್ಯಭಾರತದ ಬಹುತೇಕ ಭಾಗಗಳು ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳು ಸಾಮಾನ್ಯಕ್ಕಿಂತ ಎರಡರಿಂದ ನಾಲ್ಕು ಪಟ್ಟು ಬಿಸಿಗಾಳಿ ಇರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಆನ್ ಲೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಾಯವ್ಯ ಭಾರತದ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಬಿಸಿಗಾಳಿ ಎರಡು ಪಟ್ಟು ಹೆಚ್ಚಾಗಿರುತ್ತದೆ ಎಂದು ಐಎಂಡಿ ಅಧಿಕಾರಿಯೊಬ್ಬರು ಈ ಹಿಂದೆಯೇ ಹೇಳಿದ್ದರು.
ರಾಜಸ್ಥಾನ, ಗುಜರಾತ್, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ಮತ್ತು ತಮಿಳುನಾಡಿನ ಉತ್ತರ ಭಾಗಗಳಲ್ಲಿ ಹೆಚ್ಚಿನ ಬಿಸಿಲು ದಾಖಲಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಏಪ್ರಿಲ್‌ನಲ್ಲಿ ಭಾರತದ ಬಹುತೇಕ ಭಾಗಗಳು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನಕ್ಕೆ ಸಾಕ್ಷಿಯಾಗಬಹುದು. ಆದಾಗ್ಯೂ ದಕ್ಷಿಣ ಮತ್ತು ವಾಯುವ್ಯ ಭಾಗದ ಕೆಲವು ಪ್ರದೇಶಗಳಲ್ಲಿ ಸಾಮಾನ್ಯ ತಾಪಮಾನ ಇರಬಹುದು.
ವಾಯುವ್ಯ ಮತ್ತು ಈಶಾನ್ಯದ ಕೆಲವು ಸ್ಥಳಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಮೊಹಾಪಾತ್ರ ಹೇಳಿದ್ದಾರೆ. ದೇಶದಲ್ಲಿ ಅತೀವ ಬಿಸಿಲಿನ ಹಿನ್ನೆಲೆಯಲ್ಲಿ ಈ ಬೇಸಿಗೆಯಲ್ಲಿ ಶೇ. 9 ರಿಂದ 10 ರಷ್ಟು ಗರಿಷ್ಠ ವಿದ್ಯುತ್ ಬೇಡಿಕೆಗೆ ಭಾರತ ಸಿದ್ಧವಾಗಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



