ದೇಶಾದ್ಯಂತ ಇಂದು ರಂಜಾನ್ ಹಬ್ಬ ಆಚರಣೆ: ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ
ದೇಶದ ಹಲವು ಜಿಲ್ಲೆಗಳಲ್ಲಿ ಇಂದು ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಮುಸಲ್ಮಾನರು ಎಡಗೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರು/ನವದೆಹಲಿ: ದೇಶಾದ್ಯಂತ ಇಂದು ಸೋಮವಾರ ಮುಸಲ್ಮಾನರ ಪವಿತ್ರ ಹಬ್ಬ ಈದ್ ಉಲ್ ಫಿತರ್(ರಂಜಾನ್) ಆಚರಿಸಲಾಗುತ್ತಿದೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ಬೆಳಗ್ಗೆಯೇ ಮಸೀದಿಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿರುವುದು ಕಂಡುಬಂತು. ನಿನ್ನೆ ದೇಶದ ಪ್ರಮುಖ ನಗರಗಳಲ್ಲಿ ಈದ್-ಉಲ್-ಫಿತರ್ ಚಂದ್ರನನ್ನು ನೋಡಿದ ನಂತರ ಇಂದು ಹಬ್ಬ ಆಚರಿಸಲಾಗುತ್ತಿದೆ.
ರಂಜಾನ್ ತಿಂಗಳ ಉಪವಾಸ ಚಂದ್ರನ ದರ್ಶನದೊಂದಿಗೆ ಪ್ರಾರಂಭವಾಗಿದೆ. 30 ದಿನಗಳ ಉಪವಾಸದ ನಂತರ, ಶವ್ವಾಲ್ ಪ್ರಾರಂಭವಾಗಿದೆ. ಇದು ರಂಜಾನ್ ಅಂತ್ಯದ ನಂತರ ಬರುವ ಇಸ್ಲಾಮಿಕ್ ಕ್ಯಾಲೆಂಡರ್‌ನ 10ನೇ ತಿಂಗಳು.
ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ
ದೇಶದ ಹಲವು ಜಿಲ್ಲೆಗಳಲ್ಲಿ ಇಂದು ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಮುಸಲ್ಮಾನರು ಎಡಗೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


