ದೇಶ

ಕೇರಳ: ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಯೂಟ್ಯೂಬರ್ ಬಂಧನ

ಪೊಲೀಸ್ ಮೂಲಗಳ ಪ್ರಕಾರ, ವಯನಾಡ್ ಸಂಸದರ ಪೈಲಟ್ ವಾಹನದ ಹಾರ್ನ್‌ನಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.

ಕೇರಳ: ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಯೂಟ್ಯೂಬರ್ ಬಂಧನ
ಸಾಂದರ್ಭಿಕ ಚಿತ್ರ
Published On :

ತ್ರಿಶೂರ್: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮನ್ನುತ್ತಿ ಪೊಲೀಸರು ಎಲನಾಡು ನಿವಾಸಿ ಅನೀಶ್ ಅಬ್ರಹಾಂ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಶನಿವಾರ ರಾತ್ರಿ 9.30ರ ಸುಮಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಕ್ಷೇತ್ರ ಮತ್ತು ಮಲಪ್ಪುರಂ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಲಪ್ಪುರಂನ ವಂದೂರಿನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಮನ್ನುತ್ತಿ ಬೈಪಾಸ್ ಜಂಕ್ಷನ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸ್ ಮೂಲಗಳ ಪ್ರಕಾರ, ವಯನಾಡ್ ಸಂಸದರ ಪೈಲಟ್ ವಾಹನದ ಹಾರ್ನ್‌ನಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.

ಮನ್ನುತ್ತಿ ಸಬ್ ಇನ್ಸ್‌ಪೆಕ್ಟರ್ ನೇತೃತ್ವದ ಪೊಲೀಸ್ ತಂಡವು ಕಾರನ್ನು ತೆರವುಗೊಳಿಸಲು ಪ್ರಯತ್ನಿಸಿದಾಗ, ಆತ ಅವರೊಂದಿಗೆ ಘರ್ಷಣೆಯಲ್ಲಿ ತೊಡಗಿದ್ದನು ಎನ್ನಲಾಗಿದೆ.

ಉದ್ದೇಶಪೂರ್ವಕವಾಗಿ ಬೆಂಗಾವಲು ಪಡೆಯ ವಾಹನಳ ಮಧ್ಯೆ ವಾಹನ ಚಲಾಯಿಸುವುದು, ಜೀವಕ್ಕೆ ಅಪಾಯವನ್ನುಂಟುಮಾಡುವುದು ಮತ್ತು ಪೊಲೀಸ್ ನಿರ್ದೇಶನಗಳನ್ನು ಪಾಲಿಸದಿದ್ದಕ್ಕಾಗಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.