ಮೇ ತಿಂಗಳಲ್ಲಿ ರಣಬಿಸಿಲಿಗೆ ಉತ್ತರ ಕರ್ನಾಟಕ ಸೇರಿ ಭಾರತ ತತ್ತರ: IMD ಎಚ್ಚರಿಕೆ
ವಾಯುವ್ಯ, ಮಧ್ಯ ಮತ್ತು ಈಶಾನ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ಅಲೆಗಳು ಕಾಡಲಿವೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಆದಾಗ್ಯೂ, ಕಳೆದ ವರ್ಷ ದಾಖಲಾದ ತೀವ್ರತರವಾದ ಶಾಖವನ್ನು ತಡೆಯಲು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯು ಸಹಾಯ ಮಾಡುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
IMD ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು, ಈ ಮೇ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ, ವಿಶೇಷವಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಗಂಗಾನದಿಯ ಪಶ್ಚಿಮ ಬಂಗಾಳದ ಗಂಗಾನದಿ ತೀರ. ಗುಜರಾತ್, ಒಡಿಶಾ, ಛತ್ತೀಸ್‌ಗಢ, ಮಹಾರಾಷ್ಟ್ರ, ಪಕ್ಕದ ತೆಲಂಗಾಣ ಮತ್ತು ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಉಷ್ಣಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
"ವಾಯುವ್ಯ, ಮಧ್ಯ ಮತ್ತು ಈಶಾನ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಪದೇ ಪದೇ ತೀವ್ರವಾದ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ಮಳೆ ಪ್ರಮಾಣ ವಾಡಿಕೆಗಿಂತ ಅಧಿಕವಾಗಿರುತ್ತದೆ. 2024ರ ಮೇ ತಿಂಗಳಂತೆ ಈ ಬಾರಿಯೂ ಮಳೆ ಒಂದಷ್ಟು ತಂಪೆರೆಯುವ ಸಾಧ್ಯತೆ ಇದೆ ಎಂದು ಮಹಾಪಾತ್ರ ಹೇಳಿದರು.
ವಿಶೇಷವಾಗಿ ವೃದ್ಧರು, ಮಕ್ಕಳು ಮತ್ತು ಅನಾರೋಗ್ಯಕ್ಕೆ ಸಿಲುಕಿರುವ ಜನರು ಶಾಖದ ಬಳಲಿಕೆ ಮತ್ತು ಶಾಖದ ಹೊಡೆತಕ್ಕೆ ಸಿಲುಕಿ ಬಿಸಿಲ ಸಂಬಂಧಿತ ಕಾಯಿಲೆಗಳಿಗೆ ಹೆಚ್ಚು ಒಳಗಾಗುವ ಅಪಾಯವಿದೆ. ಹೀಗಾಗಿ ವೃದ್ಧರು ಮತ್ತು ಮಕ್ಕಳು ಹೊರಗೆ ಬರದಂತೆ ಸಲಹೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



