ಜಾತಿ ಗಣತಿ: ರಾಜಕೀಯ ಲಾಭ ಪಡೆಯಲು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ; ರಾಹುಲ್ ಗೆ ನೀಡಿದ ಸೂಚನೆ ಏನು?
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಂಪೂರ್ಣ ಬೆಂಬಲದೊಂದಿಗೆ ಜಾತಿ ಗಣತಿ ಬೇಡಿಕೆ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನವದೆಹಲಿ: ಮುಂದಿನ ದಶಕದ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಜಾತಿ ಗಣತಿಯ ರಾಜಕೀಯ ಲಾಭ ಪಡೆಯಲು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸಮರ ಆರಂಭವಾಗಿದೆ.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಂಪೂರ್ಣ ಬೆಂಬಲದೊಂದಿಗೆ ಜಾತಿ ಗಣತಿ ಬೇಡಿಕೆ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಆದರೆ, ಕಾಂಗ್ರೆಸ್ ಸಮರ್ಥನೆಯೊಂದಿಗೆ ರಾಹುಲ್ ಗಾಂಧಿ ಜಾತಿ ಗಣತಿ ಕ್ರೆಡಿಟ್ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 18, 2024 ರಂದೇ ಜಾತಿ ಗಣತಿಯ ಸುಳಿವು ನೀಡಿದ್ದರು ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಜನಗಣತಿ ಕುರಿತು ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಮತ್ತು ಜಾತಿ ಗಣತಿಯ ಬೇಡಿಕೆಗಾಗಿ ಕಾಯುವಂತೆ ಶಾ ಹೇಳಿದ್ದರು.
ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಯ ಭಾಗವಾಗಿ 2011 ರಲ್ಲಿ ಸಂಗ್ರಹಿಸಿದ ಜಾತಿ ಡೇಟಾವನ್ನು ಬಿಡುಗಡೆ ಮಾಡಲು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಫಲವಾಗಿತ್ತು. ಆದಾಗ್ಯೂ,
ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನಿಜವಾಗಿಯೂ ಸಾಮಾಜಿಕ ನ್ಯಾಯದ ನಿಲುವನ್ನು ಎತ್ತಿ ಹಿಡಿದಿದ್ದಾರೆ ಮತ್ತು ಈ ಕ್ರಮವು ಸರಿಯಾದ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ' ಎಂದು ಮಾಳವೀಯಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



