ಪಹಲ್ಗಾಮ್ ಉಗ್ರ ದಾಳಿಯಿಂದ ಗಮನ ಬೇರೆಡೆ ಸೆಳೆಯಲು ಜಾತಿ ಗಣತಿಗೆ ಕೇಂದ್ರ ನಿರ್ಧಾರ
ಜಾತಿ ಗಣತಿ ನಿರ್ಧಾರದ ಶ್ರೇಯಸ್ಸು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಲ್ಲಬೇಕು ಎಂದು ಕಾಂಗ್ರೆಸ್‌ನ ಮಿತ್ರಪಕ್ಷವಾಗಿರುವ ಶಿವಸೇನೆ(UBT) ಸಂಸದ ರಾವತ್ ಹೇಳಿದರು.

ಮುಂಬೈ: ಮುಂದಿನ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ನಿರ್ಧರಿಸಿದ ಕೇಂದ್ರ ಈ ಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೇ ಕಾರಣ ಎಂದು ಶಿವಸೇನೆ(ಯುಬಿಟಿ)ಸಂಸದ ಸಂಜಯ್ ರಾವತ್ ಗುರುವಾರ ಹೇಳಿದ್ದಾರೆ. ಆದರೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಟೀಕಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಪಟ್ಟಣದಲ್ಲಿ ಭಯೋತ್ಪಾದಕ ದಾಳಿ ನಡೆದು ಕೇವಲ ಒಂದು ವಾರದಲ್ಲಿಯೇ ಜಾತಿ ಗಣತಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಏಪ್ರಿಲ್ 22 ರ ಹತ್ಯಾಕಾಂಡದ ಬಗ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಹಲವು ಪ್ರಶ್ನೆಗಳನ್ನು ಎದುರಿಸುತ್ತಿರುವಾಗ, ಜನರ ಗಮನವನ್ನು ಬೇರೆಡೆ ಸೆಳೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾವತ್ ಹೇಳಿದ್ದಾರೆ.
ಜಾತಿ ಗಣತಿಯು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ವಿಷಯವಾಗಿದೆ ಒತ್ತಿ ಹೇಳಿದ ರಾವತ್, ಕ್ಯಾಬಿನೆಟ್ (CCPA)ಈ ನಿರ್ಧಾರ ತೆಗೆದುಕೊಂಡಿದ್ದರೂ ಈ ವಿಚಾರದಲ್ಲಿ ದೇಶ ಜನ, ದಲಿತರು, ತುಳಿತಕ್ಕೊಳಗಾದ ಮತ್ತು ಹಿಂದುಳಿದ ಸಮಾಜವು ರಾಹುಲ್ ಗಾಂಧಿಯವರಿಗೆ ಮನ್ನಣೆ ನೀಡುತ್ತದೆ" ಎಂದು ಪ್ರತಿಪಾದಿಸಿದರು.
ರಾಹುಲ್ ಗಾಂಧಿಯವರು ಕಳೆದ ಹತ್ತು ವರ್ಷಗಳಿಂದ ಜಾತಿ ಆಧಾರಿತ ಜನಗಣತಿಯ ವಿಷಯವನ್ನು ನಿರಂತರವಾಗಿ ಪ್ರಸ್ತಾಪಿಸುತ್ತಿದ್ದಾರೆ. ಜಾತಿ ಗಣತಿ ನಿರ್ಧಾರದ ಶ್ರೇಯಸ್ಸು ಲೋಕಸಭೆ ಪ್ರತಿಪಕ್ಷ ನಾಯಕನಿಗೆ ಸಲ್ಲಬೇಕು ಎಂದು ಕಾಂಗ್ರೆಸ್‌ನ ಮಿತ್ರಪಕ್ಷವಾಗಿರುವ ಶಿವಸೇನೆ(UBT) ಸಂಸದ ರಾವತ್ ಹೇಳಿದರು.
ಬಿಹಾರ(2025 ರ ಕೊನೆಯಲ್ಲಿ) ಮತ್ತು ಪಶ್ಚಿಮ ಬಂಗಾಳ(2026) ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾವತ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



