ಅಮೃತಸರ: ಭಯೋತ್ಪಾದನಾ ಸಂಚು ವಿಫಲ; ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶ!
ಅಮೃತಸರ ಜಿಲ್ಲೆಯ ಭರೋಪಾಲ್ ಗ್ರಾಮದ ಬಳಿ ಪಂಜಾಬ್ ಪೊಲೀಸರ ಸಮನ್ವಯದಲ್ಲಿ ಗಡಿ ಭದ್ರತಾ ಪಡೆ (BSF) ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿದೆ.

ಅಮೃತಸರ: ಪಹಲ್ಗಾಮ್ ಉಗ್ರರ ದಾಳಿ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೊಂದು ದೊಡ್ಡ ಭಯೋತ್ಪಾದನಾ ಸಂಚನ್ನು ಗಡಿ ಭದ್ರತಾ ಪಡೆ ಅಮೃತಸರ ಗಡಿಯಲ್ಲಿ ವಿಫಲಗೊಳಿಸಿದೆ.
ಹೌದು, ಅಮೃತಸರ ಜಿಲ್ಲೆಯ ಭರೋಪಾಲ್ ಗ್ರಾಮದ ಬಳಿ ಪಂಜಾಬ್ ಪೊಲೀಸರ ಸಮನ್ವಯದಲ್ಲಿ ಗಡಿ ಭದ್ರತಾ ಪಡೆ (BSF) ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿದೆ.
ಬಿಎಸ್‌ಎಫ್ ಇಂಟಲಿಜೆನ್ಸ್ ವಿಂಗ್ ನೀಡಿದ ನಂಬಲಾರ್ಹ, ಗುಪ್ತಚರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬುಧವಾರ ಸಂಜೆ ಜಂಟಿ ಶೋಧ ಕಾರ್ಯಾಚರಣೆ ನಡೆಸಿದ್ದು, ಎರಡು ಹ್ಯಾಂಡ್ ಗ್ರೆನೇಡ್‌ಗಳು, ಮೂರು ಪಿಸ್ತೂಲ್‌ಗಳು, ಆರು ಮ್ಯಾಗಜೀನ್‌ಗಳು ಮತ್ತು 50 ಸುತ್ತಿನ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
ವಶಕ್ಕೆ ಪಡೆದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಹೆಚ್ಚಿನ ತನಿಖೆಗಾಗಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಈ ಜಂಟಿ ಕಾರ್ಯಾಚರಣೆ BSF ನ ಉನ್ನತ ಮಟ್ಟದ ಸನ್ನದ್ಧತೆ ಮತ್ತು ಜಾಗರೂಕತೆಯನ್ನು ಪ್ರತಿಬಿಂಬಿಸುತ್ತದೆ. ಪಂಜಾಬ್ ಪೊಲೀಸರೊಂದಿಗೆ ತ್ವರಿತ ಮತ್ತು ಸಂಘಟಿತ ಕ್ರಮವು ಸಂಭವನೀಯ ದೊಡ್ಡ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ನಾಗರಿಕರ ರಕ್ಷಣೆಗೆ ಅದರ ಬದ್ಧತೆಯನ್ನು ತೋರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



