ದೇಶ

Pahalgam terror Attack: ಸತತ 8ನೇ ದಿನವೂ ಪಾಕ್‌ ಕದನ ವಿರಾಮ ಉಲ್ಲಂಘನೆ; ಭಾರತೀಯ ಸೇನೆ ದಿಟ್ಟ ಉತ್ತರ

ಜಮ್ಮು ಮತ್ತು ಕಾಶ್ಮೀರದ ಮೂರು ಗಡಿ ಜಿಲ್ಲೆಗಳಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಸತತ 8ನೇ ದಿನದ ರಾತ್ರಿಯೂ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

Pahalgam terror Attack: ಸತತ 8ನೇ ದಿನವೂ ಪಾಕ್‌ ಕದನ ವಿರಾಮ ಉಲ್ಲಂಘನೆ; ಭಾರತೀಯ ಸೇನೆ ದಿಟ್ಟ ಉತ್ತರ
ಸಂಗ್ರಹ ಚಿತ್ರ
Published On :

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಸತತ 8ನೇ ದಿನವೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮೂರು ಗಡಿ ಜಿಲ್ಲೆಗಳಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಸತತ 8ನೇ ದಿನದ ರಾತ್ರಿಯೂ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ನೌಶೇರಾ ಮತ್ತು ಅಖ್ನೂರ್ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಉಭಯ ರಾಷ್ಟ್ರಗಳ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರತ ಮತ್ತು ಪಾಕಿಸ್ತಾನ ಸೇನೆಗಳ ಕಾರ್ಯಾಚರಣೆ ಮಹಾನಿರ್ದೇಶಕರ (ಡಿಜಿಎಂಒ) ಮಧ್ಯೆ ನಡೆದ ಮಾತುಕತೆ ಬಳಿಕವೂ ಗುಂಡಿನ ಚಕಮಕಿ ಮುಂದುವರಿದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯಂತ್ರಣ ರೇಖೆಯಲ್ಲಿ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿ ವಿಚಾರವಾಗಿ ಭಾರತದ ಮಿಲಿಟರಿ ಕಾರ್ಯಾಚರಣೆ ಮಹಾನಿರ್ದೇಶಕರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.