ISI ಜೊತೆ ನಂಟು: ಪಾಕಿಸ್ತಾನಕ್ಕೆ ಸೇನಾ ಮಾಹಿತಿ ಸೋರಿಕೆ, ಇಬ್ಬರ ಬಂಧನ
ಬಂಧನಕ್ಕೊಳಗಾಗಿರುವ ಇಬ್ಬರೂ ಅಮೃತಸರ ಕೇಂದ್ರ ಕಾರಾಗೃಹದಲ್ಲಿರುವ ಹರ್‌ಪ್ರೀತ್ ಸಿಂಗ್ ಅಲಿಯಾಸ್ ಪಿಟ್ಟು ಇಬ್ಬರಿಗೆ ನಿರ್ದೇಶನ ನೀಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಚಂಡೀಗಢ: ಸೇನಾ ಕಂಟೋನ್ಮೆಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಗಳನ್ನು ಶೇರ್ ಮಾಸಿಹ್ ಮತ್ತು ಸೂರಜ್ ಮಾಸಿಹ್ ಗುರ್ತಿಸಲಾಗಿದ್ದು, ಇಬ್ಬರನ್ನೂ ಅಮೃತಸರ ಕೇಂದ್ರ ಜೈಲಿಗೆ ಕಳುಹಿಸಲಾಗಿದೆ.
ಬಂಧನಕ್ಕೊಳಗಾಗಿರುವ ಇಬ್ಬರೂ ಅಮೃತಸರ ಕೇಂದ್ರ ಕಾರಾಗೃಹದಲ್ಲಿರುವ ಹರ್‌ಪ್ರೀತ್ ಸಿಂಗ್ ಅಲಿಯಾಸ್ ಪಿಟ್ಟು ಇಬ್ಬರಿಗೆ ನಿರ್ದೇಶನ ನೀಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯ ವೇಳೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಜೊತೆ ಇವರು ಸಂಪರ್ಕ ಹೊಂದಿದ್ದರು. ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಸತತ 9ನೇ ದಿನವೂ ಪಾಕ್ ಕದನ ವಿರಾಮ ಉಲ್ಲಂಘನೆ, ಸೇನೆ ದಿಟ್ಟ ಉತ್ತರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


