ದೇಶ

Pahalgam terror Attack: ಸತತ 11ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ದಿಟ್ಟ ಉತ್ತರ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ.

Pahalgam terror Attack: ಸತತ 11ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ದಿಟ್ಟ ಉತ್ತರ
ಸಂಗ್ರಹ ಚಿತ್ರ
Published On :

ಶ್ರೀನಗರ: ಸತತ 11ನೇ ದಿನವೂ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು. ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದಕ್ಕೆ ಭಾರತ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ.

ಪಾಕಿಸ್ತಾನಿ ಪಡೆಗಳು ಗಡಿಯಲ್ಲಿ ಹಲವಾರು ಸ್ಥಳಗಳಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಭಾರತೀಯ ಸೇನೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಪ್ರದೇಶಗಳಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ ಎಂದು ತಿಳಿಸಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹಳಸಿದ್ದು, ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನದಿಂದ ಸತತ 11ನೇ ದಿನವೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.