ಭುವನೇಶ್ವರ: ಮನೆ ಮಾಲಕಿ, ಆಕೆಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ಮನೆಕೆಲಸದಾಳು ಬಂಧನ
ಆರೋಪಿಯು ಕಳೆದ ಕೆಲವು ವಾರಗಳಿಂದ ಅವರ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಅವರ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಭುವನೇಶ್ವರ: ತಾನು ಕೆಲಸ ಮಾಡುತ್ತಿದ್ದ ಮನೆ ಮಾಲೀಕರ ಪತ್ನಿ ಮತ್ತು ಅವರ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಮನೆ ಕೆಲಸದಾಳು ಸರೋಜ್ ಕುಮಾರ್ ಬೆಹೆರಾನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಸಂತ್ರಸ್ತೆ ಮಹಿಳೆ ಶನಿವಾರ ಬಡಗಡ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದು, ಆರೋಪಿಯನ್ನು ಜಾಜ್‌ಪುರ ಜಿಲ್ಲೆಯ ಸರೋಜ್ ಕುಮಾರ್ ಬೆಹೆರಾನನ್ನು ಭಾನುವಾರ ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಆರೋಪಿಯು ದೂರುದಾರರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲಸ ಮಾಡುವಾಗ, ಆರೋಪಿಯು ದೂರುದಾರ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳ ಫೋಟೋ ಹಾಗೂ ವಿಡಿಯೋಗಳನ್ನು ಮಾಡಿಕೊಂಡು ಅವರನ್ನು ಬ್ಲ್ಯಾಕ್‌ಮೇಲ್ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಎಫ್‌ಐಆರ್ ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ.
ಆರೋಪಿಯು ಕಳೆದ ಕೆಲವು ವಾರಗಳಿಂದ ಅವರ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಅವರ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ವಿಚಾರಣೆಯ ಸಮಯದಲ್ಲಿ, ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.
ತನಿಖೆಯ ಸಮಯದಲ್ಲಿ ಆರೋಪಿಯ ಹೆಸರಿನಲ್ಲಿ ಜಾಜ್‌ಪುರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಒಂದು ಪ್ರಕರಣವಿರುವುದು ಪೊಲೀಸರಿಗೆ ಕಂಡುಬಂದಿದೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಬಿಎನ್‌ಎಸ್, ಐಟಿ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



