ದೇಶ

ಪಾಕ್ ಮೇಲೆ ದಾಳಿಗೆ ಭಾರತ ಸನ್ನದ್ಧ; ಮೇ 7ರಂದು ಮಾಕ್​​ ಡ್ರಿಲ್ ನಡೆಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ವಾಯುದಾಳಿಯ ಸೈರನ್‌ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಮತ್ತು "ಪ್ರತಿಕೂಲ ದಾಳಿ"ಯ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪರಿಣಾಮಕಾರಿ ರಕ್ಷಣಾ ಅಂಶಗಳ ಕುರಿತು ತರಬೇತಿ ನೀಡಬೇಕು ಎಂದು ಸೂಚಿಸಲಾಗಿದೆ.

ಪಾಕ್ ಮೇಲೆ ದಾಳಿಗೆ ಭಾರತ ಸನ್ನದ್ಧ; ಮೇ 7ರಂದು ಮಾಕ್​​ ಡ್ರಿಲ್ ನಡೆಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಮೇ 7 ರಂದು ಮಾಕ್​​ ಡ್ರಿಲ್ ನಡೆಸುವಂತೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಹಲವು ರಾಜ್ಯಗಳಿಗೆ ಸೂಚಿಸಿದೆ ಎಂದು ಸರ್ಕಾರಿ ಮೂಲಗಳು ಸೋಮವಾರ ತಿಳಿಸಿವೆ.

ವಾಯುದಾಳಿಯ ಸೈರನ್‌ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಮತ್ತು "ಪ್ರತಿಕೂಲ ದಾಳಿ"ಯ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪರಿಣಾಮಕಾರಿ ರಕ್ಷಣಾ ಅಂಶಗಳ ಕುರಿತು ತರಬೇತಿ ನೀಡಬೇಕು ಎಂದು ಸೂಚಿಸಲಾಗಿದೆ.

ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ಸಿದ್ಧತೆಯನ್ನು ಪರೀಕ್ಷಿಸಲು ಮತ್ತು ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸಲು ಮೇ 7ರ ಬುಧವಾರ ಸಮಗ್ರ ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು ನಡೆಸುವಂತೆ ಗೃಹ ಸಚಿವಾಲಯ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಕ್ರ್ಯಾಶ್ ಬ್ಲ್ಯಾಕೌಟ್ ಕ್ರಮಗಳನ್ನು ಒದಗಿಸಬೇಕು, ಪ್ರಮುಖ ಸ್ಥಾವರಗಳು ಮತ್ತು ಪ್ರಮುಖ ಕಟ್ಟಡಗಳನ್ನು ಮರೆಮಾಚುವಿಕೆ ಮತ್ತು ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ನಡೆಸುವ ಬಗ್ಗೆ ಪೂರ್ವಾಭ್ಯಾಸ ಮಾಡಬೇಕು.

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದು, ಈ ಭಯೋತ್ಪಾದಕ ದಾಳಿಯ ನಂತರ ಸಿಂಧೂ ನದಿ ಒಬ್ಬಂದ ಅಮಾನತು ಸೇರಿದಂತೆ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.