ಪಂಜಾಬ್: ಅಂತಾರಾಷ್ಟ್ರೀಯ ಗಡಿ ಬಳಿ ಪಾಕ್ ಒಳನುಸುಳುಕೋರನ ಬಂಧನ- BSF
ಅಂತಾರಾಷ್ಟ್ರೀಯ ಗಡಿ ಬಳಿ ಭಾರತದ ಭೂಪ್ರದೇಶದೊಳಗೆ ನುಸುಳಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ ಬಂಧಿಸಿದೆ.

ಪಂಜಾಬ್ : ಅಂತಾರಾಷ್ಟ್ರೀಯ ಗಡಿ ಬಳಿ ಭಾರತದ ಭೂಪ್ರದೇಶದೊಳಗೆ ನುಸುಳಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಮೇ 3 ರಂದು ರಾತ್ರಿ ಸಹಪುರ್ ಬಾರ್ಡರ್ ಔಟ್ ಪೋಸ್ಟ್ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ BSF ಪಡೆಗಳು ಗಡಿ ಬೇಲಿಯ ಮುಂದೆ ಸುಮಾರು 250 ಮೀಟರ್‌ಗಳಷ್ಟು ಭಾರತದ ಭೂಪ್ರದೇಶದೊಳಗೆ ಅನುಮಾನಾಸ್ಪದ ವ್ಯಕ್ತಿಯೊಬ್ಬ ಓಡಾಡುತ್ತಿರುವುದನ್ನು ಗಮನಿಸಿದ್ದಾರೆ.
ತದನಂತರ ಆ ವ್ಯಕ್ತಿಯನ್ನು ಪಾಕಿಸ್ತಾನಿ ಪ್ರಜೆ ಎಂದು ಗುರುತಿಸಲಾಗಿದ್ದು, ಪೊದೆಗಳಲ್ಲಿ ಅಡಗಿಕೊಂಡಿರುವುದು ಕಂಡುಬಂದಿತು. ತಕ್ಷಣ ಕ್ಷಿಪ್ರ ಕಾರ್ಯಪಡೆಗಳೊಂದಿಗೆ ಇಡೀ ಪ್ರದೇಶವನ್ನು ಸುತ್ತುವರೆದ BSF ಪಡೆಗಳು ಪಾಕಿಸ್ತಾನಿ ಪ್ರಜೆಯನ್ನು ತಡರಾತ್ರಿ ಯಶಸ್ವಿಯಾಗಿ ಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕ್ ಜೊತೆಗೆ ಯುದ್ಧ ಶುರುವಾದ್ರೆ ರಕ್ಷಣೆ ಪಡೆಯೋದು ಹೇಗೆ..? ಬಂಕರ್ಗಳ ತುರ್ತು ದುರಸ್ತಿಗೆ ಗಡಿ ಭಾಗದ ಜನರ ಒತ್ತಾಯ!
24 ವರ್ಷದ ಪಾಕಿಸ್ತಾನಿ ಪ್ರಜೆಯನ್ನು ಗುಜ್ರನ್‌ವಾಲಾ ಗ್ರಾಮದ ಹುಸ್ನೇನ್ ಎಂದು ಗುರುತಿಸಲಾಗಿದ್ದು, ಪ್ರಾಥಮಿಕ ವಿಚಾರಣೆಗಾಗಿ ಗಡಿ ಹೊರಠಾಣೆಗೆ ಕರೆತರಲಾಗಿದೆ. ಆತನಿಂದ ಕೆಲವು ಪಾಕಿಸ್ತಾನಿ ಕರೆನ್ಸಿ ಮತ್ತು ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


