ದೇಶ

ಗುಜರಾತ್: ಮಳೆ ಸಂಬಂಧಿತ ಅನಾಹುತ; 14 ಮಂದಿ ಸಾವು, ಮುಂದಿನ ಕೆಲವು ದಿನ ಭಾರಿ ಮಳೆಯ ಮುನ್ಸೂಚನೆ

ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ.

ಗುಜರಾತ್: ಮಳೆ ಸಂಬಂಧಿತ ಅನಾಹುತ; 14 ಮಂದಿ ಸಾವು, ಮುಂದಿನ ಕೆಲವು ದಿನ ಭಾರಿ ಮಳೆಯ ಮುನ್ಸೂಚನೆ
ಸಾಂದರ್ಭಿಕ ಚಿತ್ರ — Express Phot | Allen
Published On :

ಅಹಮದಾಬಾದ್: ಗುಜರಾತ್‌ನ ಹಲವು ಭಾಗಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ 50-60 ಕಿಮೀ ವೇಗದಲ್ಲಿ ಗುಡುಗು ಸಹಿತ ಬೀರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ 253 ತಾಲೂಕುಗಳ ಪೈಕಿ 168 ತಾಲೂಕುಗಳಲ್ಲಿ ಅಕಾಲಿಕ ಮಳೆಯಾಗಿದೆ, ಖೇಡಾ, ಗಾಂಧಿನಗರ, ಮೆಹ್ಸಾನಾ ಮತ್ತು ವಡೋದರಾ ಜಿಲ್ಲೆಗಳಲ್ಲಿ 25 ರಿಂದ 40 ಮಿಮೀ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ಹೇಳಿಕೆಯಲ್ಲಿ ತಿಳಿಸಿದೆ.

ಬಿರು ಗಾಳಿಗೆ ಮರಗಳು, ಹೋರ್ಡಿಂಗ್‌ಗಳು ನೆಲಕ್ಕುರಳಿದ್ದು, ಹಲವು ಜಿಲ್ಲೆಗಳಲ್ಲಿ ಮನೆಗಳು ಕುಸಿದುಬಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಗುಜರಾತ್‌ನ ಅಹಮದಾಬಾದ್, ಆನಂದ್, ಖೇಡಾ, ದಾಹೋದ್, ಅರಾವಳಿ ಮತ್ತು ವಡೋದರ ಜಿಲ್ಲೆಗಳಲ್ಲಿ ಸಿಡಿಲು, ವಿದ್ಯುತ್ ಆಘಾತ ಮತ್ತು ಮರ, ಮನೆಗಳು ಕುಸಿದು ಬಿದ್ದಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಹದಿಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಭಾನುವಾರ ಅಹಮದಾಬಾದ್‌ನ ವಿರಾಮಗಾಮ್‌ನಲ್ಲಿ ಸಿಡಿಲು ಬಡಿದು ಒಬ್ಬರು ಸಾವನ್ನಪ್ಪಿದ್ದಾರೆ.

ಖೇಡಾ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, ವಡೋದರಾದಲ್ಲಿ ಮೂರು, ಅಹಮದಾಬಾದ್, ದಾಹೋಡ್ ಮತ್ತು ಅರಾವಳಿಯಲ್ಲಿ ಇಬ್ಬರು, ಆನಂದ್ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ

ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.