ಪಾಕ್ ಗಡಿಯಲ್ಲಿ ಭಾರತೀಯ ವಾಯುಪಡೆಯಿಂದ ಎರಡು ದಿನ ಸಮರಾಭ್ಯಾಸ
ಈ ಸಮರಾಭ್ಯಸದಲ್ಲಿ ರಫೇಲ್, ಸು -30 ಮತ್ತು ಜಾಗ್ವಾರ್ ವಿಮಾನಗಳು ಸೇರಿದಂತೆ ಎಲ್ಲಾ ಮುಂಚೂಣಿಯ ಯುದ್ಧ ವಿಮಾನಗಳು ಭಾಗವಹಿಸಲಿವೆ ಎಂದು ರಕ್ಷಣಾ ಸಂಸ್ಥೆಯ ಮೂಲಗಳು ಮಂಗಳವಾರ ತಿಳಿಸಿವೆ.

ನವದೆಹಲಿ: ಭಾರತೀಯ ವಾಯುಪಡೆಯು ಪಾಕಿಸ್ತಾನದ ಗಡಿಯಲ್ಲಿ ಬುಧವಾರದಿಂದ ಎರಡು ದಿನಗಳ ಕಾಲ ಮೆಗಾ ಮಿಲಿಟರಿ ತಾಲೀಮು ನಡೆಸಲಿದೆ.
ಈ ಸಮರಾಭ್ಯಸದಲ್ಲಿ ರಫೇಲ್, ಸು -30 ಮತ್ತು ಜಾಗ್ವಾರ್ ವಿಮಾನಗಳು ಸೇರಿದಂತೆ ಎಲ್ಲಾ ಮುಂಚೂಣಿಯ ಯುದ್ಧ ವಿಮಾನಗಳು ಭಾಗವಹಿಸಲಿವೆ ಎಂದು ರಕ್ಷಣಾ ಸಂಸ್ಥೆಯ ಮೂಲಗಳು ಮಂಗಳವಾರ ತಿಳಿಸಿವೆ.
ಕಳೆದ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಸಂಭಾವ್ಯ ಯುದ್ಧಕ್ಕೆ ಭಾರತ ಸಿದ್ಧವಾಗುತ್ತಿದೆ.
ಭಾರತ-ಪಾಕಿಸ್ತಾನ ಗಡಿಯ ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲಿ ಹೆಚ್ಚಾಗಿ ನಡೆಯುವ ಪ್ರಮುಖ ವೈಮಾನಿಕ ತಾಲೀಮು ಬಗ್ಗೆ ಭಾರತದ ನಾಗರಿಕ ವಿಮಾನಯಾನ ಅಧಿಕಾರಿಗಳು ಈಗಾಗಲೇ ವಾಯುಪಡೆಗೆ(NOTAM) ನೋಟಾಮ್ ನೀಡಿದ್ದಾರೆ.
ರಫೇಲ್, ಸು -30 ಎಂಕೆಐ, ಮಿಗ್ -29, ಮಿರಾಜ್ -2000, ತೇಜಸ್ ಮತ್ತು AWACS (ವಾಯುಗಾಮಿ ಎಚ್ಚರಿಕೆ ಮತ್ತು ನಿಯಂತ್ರಣ ವ್ಯವಸ್ಥೆ) ವಿಮಾನಗಳು ಸೇರಿದಂತೆ ಭಾರತದ ಮುಂಚೂಣಿಯ ಯುದ್ಧ ವಿಮಾನಗಳು ಈ ಸಮರಾಭ್ಯಸದಲ್ಲಿ ಭಾಗವಹಿಸಲಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



