ಪಾಕಿಸ್ತಾನ, ಪಿಒಕೆಯಲ್ಲಿ ಉಗ್ರರ 9 ನೆಲೆಗಳ ಮೇಲೆ ನಸುಕಿನ ಜಾವ 1:05 ರಿಂದ 1:30 ರವರೆಗೆ ಬಾಂಬ್ ದಾಳಿ: ಮಹಿಳಾ ಸೇನಾಧಿಕಾರಿಗಳಿಂದ ವಿವರಣೆ
ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು. ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗದಂತೆ ಮತ್ತು ಯಾವುದೇ ನಾಗರಿಕರ ಜೀವಹಾನಿಯಾಗದಂತೆ ಸ್ಥಳಗಳನ್ನು ಆಯ್ಕೆ ಮಾಡಲಾಯಿತು.

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100 ಉಗ್ರರು ಹತರಾಗಿದ್ದಾರೆ.
ಭಾರತೀಯ ಸೇನಾಧಿಕಾರಿಗಳು ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದು ಮಹಿಳಾ ಅಧಿಕಾರಿಗಳು ಕಾರ್ಯಾಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಲ್ ಸೋಫಿಯಾ ಖುರೇಶಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು. ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು. ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗದಂತೆ ಮತ್ತು ಯಾವುದೇ ನಾಗರಿಕರ ಜೀವಹಾನಿಯಾಗದಂತೆ ಸ್ಥಳಗಳನ್ನು ಆಯ್ಕೆ ಮಾಡಲಾಯಿತು ಎಂದರು.
ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಾಶಪಡಿಸಲಾಯಿತು. ನಾಗರಿಕರ ಜೀವಹಾನಿಯಾಗದಂತೆ ಸ್ಥಳಗಳನ್ನು ಎಚ್ಚರಿಕೆಯಿಂದ ಆಯ್ಕೆ ಮಾಡಲಾಯಿತು. ಖಚಿತ ಮಾಹಿತಿಯ ನಂತರ ಗುರಿಗಳನ್ನು ನಿರ್ಧರಿಸಲಾಯಿತು ಎಂದರು.
ನಂತರ ಕರ್ನಲ್ ಸೋಫಿಯಾ ಅವರು 2008 ರ ಮುಂಬೈ ದಾಳಿಕೋರರಾದ ಅಜ್ಮಲ್ ಕಸಬ್ ಮತ್ತು ಡೇವಿಡ್ ಹೆಡ್ಲಿಗೆ ತರಬೇತಿ ನೀಡಲಾಗಿದ್ದ ಮುರಿಡ್ಕೆ ಸೇರಿದಂತೆ ನಾಶವಾದ ಭಯೋತ್ಪಾದಕ ಶಿಬಿರಗಳ ವೀಡಿಯೊಗಳನ್ನು ಪ್ರಸ್ತುತಪಡಿಸಿದರು.
ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಭಯೋತ್ಪಾದಕ ತಾಣ ಮಾರ್ಕಾಜ್ ಸುಭಾನ್ ಅಲ್ಲಾಹ್, ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯನ್ನು ಭಾರತೀಯ ಸಶಸ್ತ್ರ ಪಡೆಗಳು ಗುರಿಯಾಗಿಸಿಕೊಂಡಿವೆ. ಯಾವುದೇ ಮಿಲಿಟರಿ ನೆಲೆಯನ್ನು ಗುರಿಯಾಗಿಸಿಕೊಂಡಿಲ್ಲ. ಇಲ್ಲಿಯವರೆಗೆ ಪಾಕಿಸ್ತಾನದಲ್ಲಿ ನಾಗರಿಕರ ಸಾವುನೋವುಗಳ ವರದಿಗಳಿಲ್ಲ ಎಂದರು.
ಪಾಕಿಸ್ತಾನದೊಳಗೆ 12-18 ಕಿ.ಮೀ ದೂರದಲ್ಲಿರುವ ಸಿಯಾಲ್‌ಕೋಟ್‌ನ ಮೆಹಮೂನಾ ಜೋಯಾ ಶಿಬಿರ ಸೇರಿದಂತೆ ನಾಶವಾದ ಭಯೋತ್ಪಾದಕ ಶಿಬಿರಗಳನ್ನು ತೋರಿಸುವ ವೀಡಿಯೊಗಳನ್ನು ಪ್ರಸ್ತುತಪಡಿಸಿ, ಇದು ಹಿಜ್ಬುಲ್ ಮುಜಾಹಿದ್ದೀನ್‌ನ ಅತಿದೊಡ್ಡ ಶಿಬಿರಗಳಲ್ಲಿ ಒಂದಾಗಿದೆ. ಇದು ಕಥುವಾ, ಜಮ್ಮು ಪ್ರದೇಶದಲ್ಲಿ ಭಯೋತ್ಪಾದನೆಯನ್ನು ಹರಡುವ ನಿಯಂತ್ರಣ ಕೇಂದ್ರಗಳಲ್ಲಿ ಒಂದಾಗಿದೆ. ಪಠಾಣ್‌ಕೋಟ್ ವಾಯುಪಡೆಯ ನೆಲೆ ಶಿಬಿರದ ಮೇಲಿನ ದಾಳಿಯನ್ನು ಈ ಶಿಬಿರ ಯೋಜಿಸಿ ನಿರ್ದೇಶಿಸಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


