ದೇಶ

ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಸೇವಾವಧಿ ಒಂದು ವರ್ಷ ವಿಸ್ತರಣೆ

ಸೂದ್ ಅವರು ಮೇ 25, 2023 ರಂದು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಸೇವಾವಧಿ ಒಂದು ವರ್ಷ ವಿಸ್ತರಣೆ
ಪ್ರವೀಣ್ ಸೂದ್
Published On :

ನವದೆಹಲಿ: ಕೇಂದ್ರ ಸರ್ಕಾರ ಬುಧವಾರ ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅವರ ಅಧಿಕಾರಾವಧಿಯನ್ನು ಒಂದು ವರ್ಷ ವಿಸ್ತರಿಸಿದೆ.

ಸೂದ್ ಅವರು ಮೇ 25, 2023 ರಂದು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನೊಳಗೊಂಡ ಆಯ್ಕೆ ಸಮಿತಿಯ ಸಭೆಯಲ್ಲಿ ಪ್ರವೀಣ್ ಸೂದ್ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ನಿರ್ಧಾರವನ್ನು ಸೋಮವಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಯ್ಕೆ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸಂಪುಟ ನೇಮಕಾತಿ ಸಮಿತಿ(ಎಸಿಸಿ), ಮೇ 24 ರ ನಂತರ ಒಂದು ವರ್ಷದ ಅವಧಿಗೆ ಪ್ರವೀಣ್ ಸೂದ್ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲು ಅನುಮೋದನೆ ನೀಡಿದೆ.

ಸೂದ್ ಅವರು ಕರ್ನಾಟಕ ಕೇಡರ್‌ನ 1986ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.