ದೇಶ

'POK ಭಾರತದ್ದು.. ಶೂನ್ಯ ಸಹಿಷ್ಣುತೆ': Operation Sindoor ಬೆನ್ನಲ್ಲೇ ಜಗತ್ತಿಗೆ EAM S Jaishankar ಖಡಕ್ ಸಂದೇಶ!

ಪಾಕಿಸ್ತಾನ ಭಯೋತ್ಪಾದನೆಯನ್ನು ಆಶ್ರಯಿಸುತ್ತಿದೆ ಎಂದು ಭಾರತ ಪದೇ ಪದೇ ಆರೋಪಿಸಿದ್ದು, ಜಾಗತಿಕ ಭಯೋತ್ಪಾದನೆಯ ವಿರುದ್ಧ ಜಂಟಿ ಹೋರಾಟ ನಡೆಸುವಂತೆ ಜಗತ್ತಿಗೆ ಕರೆ ನೀಡಿದೆ.

'POK ಭಾರತದ್ದು.. ಶೂನ್ಯ ಸಹಿಷ್ಣುತೆ': Operation Sindoor ಬೆನ್ನಲ್ಲೇ ಜಗತ್ತಿಗೆ EAM S Jaishankar ಖಡಕ್ ಸಂದೇಶ!
ವಿದೇಶಾಂಗ ಸಚಿವ ಎಸ್ ಜೈಶಂಕರ್
Published On :

ನವದೆಹಲಿ: 'ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ್ದು.. ಅದು ಶೀಘ್ರ ಭಾರತಕ್ಕೆ ಹಿಂದುರುಗುತ್ತದೆ. ಭಯೋತ್ಪದಾನೆ ಕುರಿತು ಶೂನ್ಯ ಸಹಿಷ್ಣುತೆ ತೋರಿಸಬೇಕು' ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಜಗತ್ತಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

26 ಮಂದಿ ಭಾರತೀಯರ ಧಾರುಣ ಸಾವಿಗೆ ಕಾರಣವಾದ ಜಮ್ಮು ಮತ್ತು ಕಾಶ್ಮೀರದ ಅನಂತ್​​ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತವು ಪಾಕಿಸ್ತಾನ ಉಗ್ರ ತಾಣಗಳ ವಿರುದ್ಧ ಆಪರೇಷನ್ ಸಿಂಧೂರ್ (Operation Sindoor) ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.

ಭಾರತೀಯ ಸೇನೆ ಬುಧವಾರ ಮುಂಜಾನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳು ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರವನ್ನು ಇಂದು ನಸುಕಿನ ಜಾವ 1.05ರಿಂದ 1.30ರ ನಡುವೆ ಪ್ರಾರಂಭಿಸಿದವು. ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಅದನ್ನು ಯಶಸ್ವಿಯಾಗಿ ನಾಶಪಡಿಸಲಾಯಿತು. ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿ 9 ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿದೆ.

ಈ ಪೈಕಿ ನಾಲ್ಕು ಪಾಕಿಸ್ತಾನದ ಮುಖ್ಯ ಭೂಭಾಗದಲ್ಲಿ ಮತ್ತು ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿವೆ. ಈ ನಿರ್ದಿಷ್ಛ ದಾಳಿಯಲ್ಲಿ ಭಾರತೀಯ ಸೇನೆ ಯಾವುದೇ ಪಾಕಿಸ್ತಾನಿ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡಿಲ್ಲ ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ. ಬದಲಾಗಿ, ನಿಷೇಧಿತ ಭಯೋತ್ಪಾದಕ ಗುಂಪುಗಳು ಕಾರ್ಯಾಚರಣೆ ಕೇಂದ್ರಗಳಾಗಿ ಬಳಸಿದ ಪರಿಶೀಲಿಸಿದ ಆಧಾರದ ಮೇಲೆ ಎಲ್ಲಾ ತಾಣಗಳನ್ನು ಆಯ್ಕೆ ಮಾಡಲಾಗಿತ್ತು ಎಂದು ಹೇಳಿದೆ.

ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ತೋರಿಸಬೇಕು

ಈ ಸೇನಾ ಕಾರ್ಯಾಚರಣೆ ಬೆನ್ನಲ್ಲೇ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್, 'ಭಯೋತ್ಪಾದನೆಗೆ ಜಗತ್ತು ಶೂನ್ಯ ಸಹಿಷ್ಣುತೆಯನ್ನು ತೋರಿಸಬೇಕು' ಎಂದು ಟ್ವೀಟ್ ಮಾಡಿದ್ದಾರೆ.

POK ಭಾರತದ್ದು.. ಶೀಘ್ರ ಹಿಂದಿರುಗುತ್ತದೆ

ಇದೇ ವೇಳೆ ಪಿಒಕೆ ಕುರಿತು ಮಾತನಾಡಿರುವ ಜೈಶಂಕರ್, "ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಿದ್ದು, ಶೀಘ್ರದಲ್ಲೇ ಅದು ಭಾರತಕ್ಕೆ ಹಿಂದುರುಗಲಿದೆ' ಎಂದು ಹೇಳಿದರು.

ಪಾಕಿಸ್ತಾನ ಭಯೋತ್ಪಾದನೆಯನ್ನು ಆಶ್ರಯಿಸುತ್ತಿದೆ ಎಂದು ಭಾರತ ಪದೇ ಪದೇ ಆರೋಪಿಸಿದ್ದು, ಜಾಗತಿಕ ಭಯೋತ್ಪಾದನೆಯ ವಿರುದ್ಧ ಜಂಟಿ ಹೋರಾಟ ನಡೆಸುವಂತೆ ಜಗತ್ತಿಗೆ ಕರೆ ನೀಡಿದೆ. ಕಳೆದ ವಾರ, ಜೈಶಂಕರ್ ಅವರು ಅಲ್ಜೀರಿಯಾ, ಗ್ರೀಸ್, ಸಿಯೆರಾ ಲಿಯೋನ್, ಗಯಾನಾ, ಪನಾಮ, ಸ್ಲೊವೇನಿಯಾ ಮತ್ತು ಸೊಮಾಲಿಯಾ ಸೇರಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ರಾಷ್ಟ್ರಗಳ ತಮ್ಮ ಸಹವರ್ತಿಗಳೊಂದಿಗೆ ಚರ್ಚೆ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.