LOC ಬಳಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ: ಮೂರು ನಾಗರಿಕರ ಸಾವು
ಸದ್ಯ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಇಂದು ಮುಚ್ಚಲ್ಪಟ್ಟಿವೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿ ಮಂಗಳವಾರ ತಡರಾತ್ರಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಕನಿಷ್ಠ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ನಿರ್ದಿಷ್ಟ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ ಎಲ್‌ಒಸಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಪಾಕ್‌ನ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಸೂಕ್ತ ರೀತಿಯಲ್ಲಿ ಪ್ರತ್ಯುತ್ತರ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಇಂದು ಮುಚ್ಚಲ್ಪಡುತ್ತವೆ. ಪಠಾಣ್‌ಕೋಟ್‌ನಲ್ಲಿರುವ ಎಲ್ಲಾ ಶಾಲೆಗಳು 72 ಗಂಟೆಗಳ ಕಾಲ ಮುಚ್ಚಲ್ಪಟ್ಟಿದೆ.
ಮಂಗಳವಾರ ತಡರಾತ್ರಿ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಶೆಲ್ ದಾಳಿ ಸೇರಿದಂತೆ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



