ದೇಶ

ಭಾರತ- ಪಾಕ್ ನಡುವೆ ಯುದ್ಧದ ಕಾರ್ಮೋಡ: ದೆಹಲಿ ವಿಮಾನ ನಿಲ್ದಾಣದಲ್ಲಿ 90 ವಿಮಾನಗಳ ಹಾರಾಟ ರದ್ದು!

ಕಳೆದ ತಿಂಗಳು ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಸಶಸ್ತ್ರ ಪಡೆಗಳು ಬುಧವಾರ ದಾಳಿ ನಡೆಸಿದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸುಮಾರು 27 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

ಭಾರತ- ಪಾಕ್ ನಡುವೆ ಯುದ್ಧದ ಕಾರ್ಮೋಡ: ದೆಹಲಿ ವಿಮಾನ ನಿಲ್ದಾಣದಲ್ಲಿ 90 ವಿಮಾನಗಳ ಹಾರಾಟ ರದ್ದು!
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವಂತೆಯೇ ರಾಷ್ಟ್ರ ರಾಜಧಾನಿಯಲ್ಲಿ ವಿವಿಧ ವಿಮಾನಯಾನ ಸಂಸ್ಥೆಗಳು 90 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ ಎಂದು ಮೂಲಗಳು ತಿಳಿಸಿವೆ.

ಕಳೆದ ತಿಂಗಳು ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಸಶಸ್ತ್ರ ಪಡೆಗಳು ಬುಧವಾರ ದಾಳಿ ನಡೆಸಿದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸುಮಾರು 27 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

ವಿಮಾನ ನಿಲ್ದಾಣಗಳ ಸ್ಥಗಿತದ ಹಿನ್ನೆಲೆಯಲ್ಲಿ ಅನೇಕ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಒಟ್ಟು 46 ದೇಶೀಯ ವಿಮಾನಗಳು ಹಾಗೂ 33 ವಿದೇಶಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ಹೊರಡಬೇಕಾಗಿದ್ದ 5 ವಿಮಾನಗಳು ಹಾಗೂ ಬರಬೇಕಾಗಿದ್ದ 6 ವಿಮಾನಗಳ ಸೇವೆಯನ್ನು ರದ್ದುಗೊಳಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆ ನಡುವೆ ಇದು ನಡೆದಿದೆ.

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ಗಳು ಮತ್ತು ಅದರ ನಾಲ್ಕು ರನ್‌ವೇಗಳಾದ್ಯಂತ ಎಲ್ಲಾ ಕಾರ್ಯಾಚರಣೆಗಳು ಎಂದಿನಂತೆ ನಡೆಯುತ್ತಿವೆ. ಆದಾಗ್ಯೂ, ಬದಲಾಗುತ್ತಿರುವ ವಾಯುಪ್ರದೇಶದ ಪರಿಸ್ಥಿತಿಗಳು ಕೆಲವು ವಿಮಾನಗಳ ಮೇಲೆ ಪರಿಣಾಮ ಬೀರಿದೆ ಎಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (DIAL) ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದೆ.

ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ನಿಗದಿತ ವೇಳಾಪಟ್ಟಿಯಂತೆ ವಿಮಾನಗಳ ಕಾರ್ಯಾಚರಣೆಗೆ ಯಾವುದೇ ಅಡೆತಡೆಯಾಗದಂತೆ ಎಲ್ಲಾ ಪಾಲುದಾರರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ DIAL ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.