ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸಗೊಳಿಸಿದ ಭಾರತೀಯ ಸೇನೆ; 15 ನಗರಗಳ ಮೇಲೆ ಪಾಕ್ ದಾಳಿ ವಿಫಲ!
ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ.

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.
ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಪ್ರಕಟಿಸಿದ್ದು ದಾಳಿಯನ್ನು ಖಚಿತಪಡಿಸಿದೆ.
ಪಾಕಿಸ್ತಾನ ಚೀನಾದಿಂದ HQ-9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ಪಡೆದಿತ್ತು ಈಗ ಈ ವ್ಯವಸ್ಥೆಯನ್ನು ಭಾರತ ಸಂಪೂರ್ಣ ನಾಶ ಮಾಡಿದೆ. ದಾಳಿಯನ್ನು ಪಾಕಿಸ್ತಾನ ಸಹ ಖಚಿತಪಡಿಸಿದ್ದು, ದಾಳಿಯಲ್ಲಿ ನಾಲ್ವರು ಪಾಕಿಸ್ತಾನದ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.
ನೆನ್ನೆ ರಾತ್ರಿ ಪಾಕಿಸ್ತಾನ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು ಈ ದಾಳಿಯನ್ನು ಭಾರತ 9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ನಾಶ ಮಾಡುವ ಮೂಲಕ ತಡೆಗಟ್ಟಿದೆ.
ಆಪರೇಷನ್ ಸಿಂದೂರ್ ಗೆ ಪ್ರತೀಕಾರ ತೆಗೆದುಕೊಳ್ಳಲು ಮುಂದಾಗಿದ್ದ ಪಾಕಿಸ್ತಾನ ಭಾರತದ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ ಭಟಿಂಡ, ಚಂಡೀಗಢ, ನಲ್ ಫಲೋಡಿ, ಉತ್ತರಲೈ, ಭುಜ್ ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



