Haryana horror: ವೆಂಟಿಲೇಟರ್‌ನಲ್ಲಿದ್ದ ಗಗನಸಖಿಯ ಮೇಲೆ ಆಸ್ಪತ್ರೆ ಸಿಬ್ಬಂದಿಯಿಂದಲೇ ಅತ್ಯಾಚಾರ
ಹರ್ಯಾಣದ ಗುರುಗ್ರಾಮ್ ನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, 46 ವರ್ಷದ ಮಹಿಳೆ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ.

ಚಂಡೀಘಡ: ಅತ್ತ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಸೈನಿಕರ ನಡುವಿನ ಸಂಘರ್ಷ ಭುಗಿಲೆದ್ದಿರುವಂತೆಯೇ ಇತ್ತ ಹರ್ಯಾಣದಲ್ಲಿ ಭೀಕರ ಘಟನೆಯೊಂದು ವರದಿಯಾಗಿದ್ದು, ಅನಾರೋಗ್ಯದಿಂದಾಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.
ಹರ್ಯಾಣದ ಗುರುಗ್ರಾಮ್ ನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, 46 ವರ್ಷದ ಮಹಿಳೆ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ.
ಮೂಲಗಳ ಪ್ರಕಾರ 46 ವರ್ಷದ ಮಹಿಳೆ ತಾನು ತಂಗಿದ್ದ ಹೋಟೆಲ್‌ನ ಈಜುಕೊಳದಲ್ಲಿ ಈಜುತ್ತಿದ್ದಾಗ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್ 5 ರಂದು ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೇ ಸಂದರ್ಭದಲ್ಲೇ ಆಸ್ಪತ್ರೆ ಸಿಬ್ಬಂದಿ ಅತ್ಯಾಚಾರ ವೆಸಗಿದ್ದಾನೆ ಎಂದು ಹೇಳಲಾಗಿದೆ.
ಡಿಸ್ಚಾರ್ಜ್ ಬಳಿಕ ಪೊಲೀಸ್ ದೂರು
ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆಸ್ಪತ್ರೆಯಿಂದ ಹೊರಬಂದ ಮಹಿಳೆ ಇದೀಗ ಪೊಲೀಸ್ ದೂರು ನೀಡಿದ್ದು, ದೂರಿನಲ್ಲಿ "ಏಪ್ರಿಲ್ 6 ರಂದು, ನಾನು ವೆಂಟಿಲೇಟರ್‌ನಲ್ಲಿದ್ದಾಗ ಕೆಲವು ಆಸ್ಪತ್ರೆ ಸಿಬ್ಬಂದಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು" ಎಂದು ಆರೋಪಿಸಿದ್ದಾರೆ.
ಡಿಸ್ಚಾರ್ಜ್ ಆದ ನಂತರ, ಅವರು ಘಟನೆಯ ಬಗ್ಗೆ ತಮ್ಮ ಪತಿಗೆ ತಿಳಿಸಿದರು ಮತ್ತು ನಂತರ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಲಾಗಿದೆ ಎಂದು ಗಗನಸಖಿ ಹೇಳಿದರು. ದೂರಿನ ನಂತರ, ಸೋಮವಾರ ಸದರ್ ಪೊಲೀಸ್ ಠಾಣೆಯಲ್ಲಿ ಆಸ್ಪತ್ರೆಯ ಗುರುತಿಸಲಾಗದ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ಸಂತ್ರಸ್ತೆಯ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ. ಪೊಲೀಸ್ ತಂಡ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದೆ ಎಂದು ಗುರುಗ್ರಾಮ್ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಆರೋಪಿ ದೀಪಕ್ ಕುಮಾರ್ ಬಂಧನ
ಇನ್ನು ಇದೀಗ ಪ್ರಕರಣ ಆರೋಪಿ ದೀಪಕ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತ ಘಟನೆ ನಡೆದ ಮೇದಾಂತ ಆಸ್ಪತ್ರೆಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



