ಇಡೀ ಪಶ್ಚಿಮ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ದಾಳಿಯನ್ನು ಬಲವಾಗಿ ಹಿಮ್ಮೆಟ್ಟಿಸಲಾಗಿದೆ: ಸೇನೆ
ಎಲ್ಲಾ ದುಷ್ಟ ಉದ್ದೇಶಗಳಿಗೆ ಬಲದಿಂದ ಪ್ರತಿಕ್ರಿಯಿಸಲಾಗುವುದು ಎಂದು ಪ್ರತಿಪಾದಿಸುವ ಸಣ್ಣ ವೀಡಿಯೊ ಕ್ಲಿಪ್ ನ್ನು ಸಹ ಪೋಸ್ಟ್‌ನೊಂದಿಗೆ ಹಂಚಿಕೊಂಡಿದೆ.

ಜಮ್ಮು: ಪಾಕಿಸ್ತಾನದ ಸಶಸ್ತ್ರ ಪಡೆಗಳು ನಿನ್ನೆ ಮತ್ತು ಇಂದು ಶುಕ್ರವಾರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್ ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದ್ದು ಅವುಗಳನ್ನು 'ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ' ಎಂದು ಭಾರತೀಯ ಸೇನೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನಿ ಪಡೆಗಳು 'ಹಲವಾರು ಕದನ ವಿರಾಮ ಉಲ್ಲಂಘನೆ'ಗಳನ್ನು ನಡೆಸಿವೆ ಎಂದು ಭಾರತೀಯ ಸೇನೆಯು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.
ಎಲ್ಲಾ ದುಷ್ಟ ಉದ್ದೇಶಗಳಿಗೆ ಬಲದಿಂದ ಪ್ರತಿಕ್ರಿಯಿಸಲಾಗುವುದು ಎಂದು ಪ್ರತಿಪಾದಿಸುವ ಸಣ್ಣ ವೀಡಿಯೊ ಕ್ಲಿಪ್ ನ್ನು ಸಹ ಪೋಸ್ಟ್‌ನೊಂದಿಗೆ ಹಂಚಿಕೊಂಡಿದೆ.
'ಆಪರೇಷನ್ ಸಿಂದೂರ್ - ಪಾಕಿಸ್ತಾನ ಸಶಸ್ತ್ರ ಪಡೆಗಳು 2025 ರ ಮೇ 08 ಮತ್ತು 09 ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್ ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದವು. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆಗಳನ್ನು ಸಹ ನಡೆಸಿವೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.
ಡ್ರೋನ್ ದಾಳಿಗಳನ್ನು 'ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಯಿತು. ಕದನ ವಿರಾಮ ಉಲ್ಲಂಘನೆಗಳಿಗೆ 'ಸೂಕ್ತ ಉತ್ತರ ನೀಡಲಾಯಿತು ಎಂದು ಭಾರತೀಯ ಸೇನೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



