ಕದನ ವಿರಾಮ ಉಲ್ಲಂಘನೆ: ಇದಕ್ಕೆ ಪಾಕಿಸ್ತಾನವೇ ಸಂಪೂರ್ಣ ಹೊಣೆ- ವಿಕ್ರಮ್ ಮಿಸ್ರಿ
ಪಾಕಿಸ್ತಾನದ ದಾಳಿಯನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದು, ಭಾರತೀಯ ಸೇನೆಯೂ ಸಮರ್ಥವಾಗಿ ಪ್ರತ್ಯುತ್ತರ ನೀಡಿದೆ.

ನವದೆಹಲಿ: ಕದನ ವಿರಾಮ ಒಪ್ಪಂದ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಒಪ್ಪಂದ ಉಲ್ಲಂಘಿಸಿದ ಪಾಕಿಸ್ತಾನವೇ ಇದಕ್ಕೆ ಸಂಪೂರ್ಣ ಜವಾಬ್ದಾರಿಯಾಗಿದ್ದು, ನಮ್ಮ ಸೇನೆಯೂ ಪ್ರತ್ಯುತ್ತರ ನೀಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮಿಕ್ರಮ್ ಮಿಸ್ತಿ ತಿಳಿಸಿದ್ದಾರೆ
ಕದನ ವಿರಾಮ ಉಲ್ಲಂಘನೆ ವರದಿ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯನ್ನು ತಡೆಯಲು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಇಂದು ಮಧ್ಯಾಹ್ನ ನಡೆದ ಮಾತುಕತೆ ಬಳಿಕ ಕದನ ವಿರಾಮ ಒಪ್ಪಂದಕ್ಕೆ ಎರಡೂ ರಾಷ್ಟ್ರಕ್ಕೆ ಸಮ್ಮತಿ ನೀಡಿದ್ದವು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಮತ್ತೆ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದೆ. ಇದು ಅತ್ಯಂತ ಖಂಡನೀಯವಾಗಿದೆ. ಇದಕ್ಕೆ ಪಾಕಿಸ್ತಾನವೇ ಹೊಣೆ ಎಂದರು.
ಪಾಕಿಸ್ತಾನದ ದಾಳಿಯನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದು, ಭಾರತೀಯ ಸೇನೆಯೂ ಸಮರ್ಥವಾಗಿ ಪ್ರತ್ಯುತ್ತರ ನೀಡಿದೆ. ಈ ಸೂಕ್ಷ್ಮ ವಿಚಾರವನ್ನು ಪಾಕಿಸ್ತಾನ ಅರ್ಥ ಮಾಡಿಕೊಳ್ಳಬೇಕಾಗಿದ್ದು, ಇದನ್ನು ತಡೆಯಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮತ್ತೊಮ್ಮೆ ಭಾರತಕ್ಕೆ ದ್ರೋಹ ಬಗೆದು ಕದನ ವಿರಾಮವನ್ನು ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ಡ್ರೋನ್ ಗಳು ಕಾಣಿಸಿದ ನಂತರ ರಾಜಸ್ಥಾನದ ಜೈಸಲ್ಮೇರ್, ಬಾರ್ಮರ್, ಗುಜರಾತಿನ ಕಚ್ ಮತ್ತಿತರ ಅನೇಕ ಗಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡ್ರೋನ್ ಹಾರಾಟದ ದೃಶ್ಯಗಳು ಕಂಡುಬಂದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



