ದೇಶ

ಮಾಲೀಕನ ಪತ್ನಿ, ಅಪ್ರಾಪ್ತ ಮಗಳ ನಗ್ನ ವಿಡಿಯೋ ರೆಕಾರ್ಡ್; Video ತೋರಿಸಿ ಮನೆ ಕೆಲಸದವನಿಂದಲೇ ಅತ್ಯಾಚಾರ!

ಈ ಸಂಬಂಧ ಮಹಿಳೆ ಬಡಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ, ಪೊಲೀಸರು ಸೋಮವಾರ ಆರೋಪಿಯನ್ನು ಬಂಧಿಸಿದ್ದಾರೆ.

ಮಾಲೀಕನ ಪತ್ನಿ, ಅಪ್ರಾಪ್ತ ಮಗಳ ನಗ್ನ ವಿಡಿಯೋ ರೆಕಾರ್ಡ್; Video ತೋರಿಸಿ ಮನೆ ಕೆಲಸದವನಿಂದಲೇ ಅತ್ಯಾಚಾರ!
ಸಾಂದರ್ಭಿಕ ಚಿತ್ರ
Published On :

ಭುವನೇಶ್ವರ: ಮನೆಕೆಲಸಕ್ಕೆ ಬಂದಿದ್ದ ವ್ಯಕ್ತಿಯೇ ಮಾಲೀಕನ ಪತ್ನಿ, ಅಪ್ರಾಪ್ತ ಮಗಳ 'ನಗ್ನ ವಿಡಿಯೋ' ರೆಕಾರ್ಡ್ ಮಾಡಿ ಬಳಿಕ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಅತ್ಯಾಚಾರ ಮಾಡಿರುವ ಘಟನೆ ಒಡಿಶಾದಲ್ಲಿ ವರದಿಯಾಗಿದೆ.

ಒಡಿಶಾದ ಭುವನೇಶ್ವರದ ಬಡಗಡ ಪ್ರದೇಶದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಮನೆ ಮಾಲೀಕನ ಪತ್ನಿ ಮತ್ತು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದೆ ಆರೋಪದ ಮೇರೆಗೆ 22 ವರ್ಷದ ಮನೆಕೆಲಸಗಾರ ಸರೋಜ್ ಕುಮಾರ್ ಬೆಹೆರಾ ಎಂಬಾತನನ್ನುಪೊಲೀಸರು ಬಂಧಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಪ್ರಕಾರ, ಜಾಜ್‌ಪುರ ಜಿಲ್ಲೆಯ ನಿವಾಸಿಯಾಗಿರುವ ಆರೋಪಿ ಭುವನೇಶ್ವರದ ಬಡಗಡ ಪ್ರದೇಶದ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ತನ್ನ ಮತ್ತು ತನ್ನ ಮಗಳ ಕೆಲವು ಫೋಟೋಗಳು ಮತ್ತು ವೀಡಿಯೊಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿದ್ದ.

ಬಳಿಕ ಇದೇ ವಿಡಿಯೋಗಳನ್ನು ತೋರಿಸಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ಇಬ್ಬರ ಮೇಲೂ ಹಲವು ಬಾರಿ ಅತ್ಯಾಚಾರ ವೆಸಗಿದ್ದ ಎಂದು ಆರೋಪಿಸಿದ್ದಾರೆ.

ಬಳಿಕ ಈ ವಿಚಾರ ಪತಿಗೆ ತಿಳಿದಿದ್ದು ಪತಿಯ ನೆರವಿನೊಂದಿಗೆ ಪೊಲೀಸ್ ದೂರು ನೀಡಲಾಗಿದೆ. ಈ ಸಂಬಂಧ ಮಹಿಳೆ ಬಡಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ, ಪೊಲೀಸರು ಸೋಮವಾರ ಆರೋಪಿಯನ್ನು ಬಂಧಿಸಿದ್ದಾರೆ.

ಬಳಿಕ ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು, ನಂತರ ಭಾರತೀಯ ನ್ಯಾಯ ಸಂಹಿತಾ ಬಿಎನ್‌ಎಸ್ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಆರೋಪಿ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.