'ಭವಿಷ್ಯದ ಉಗ್ರ ದಾಳಿಯನ್ನು ದೇಶದ ವಿರುದ್ಧದ ಯುದ್ಧವೆಂದು ಪರಿಗಣಿಸುತ್ತೇವೆ', Operation Sindoor ಮುಂದುವರಿಕೆ'; ಉನ್ನತ ಮಟ್ಟದ ಸಭೆಯಲ್ಲಿ ಭಾರತ
ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ ಕ್ರಮಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಮೂರೂ ಪಡೆಗಳು ಮುಖ್ಯಸ್ಥರ, ಸೇನಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಅವರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ.

ನವದೆಹಲಿ: ಪಾಕಿಸ್ತಾನದೊಂದಿಗೆ ಸೇನಾ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆ ಭಾರತದ ಭದ್ರತಾ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಿಬ್ಬಂದಿಯೊಂದಿಗೆ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ್ದು, ಈ ವೇಳೆ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ ಕ್ರಮಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಮೂರೂ ಪಡೆಗಳು ಮುಖ್ಯಸ್ಥರ, ಸೇನಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಅವರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ.
ಭಾರತದ ನೆಲೆಗಳ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ, ಭದ್ರತಾ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ತಿರುಗೇಟು ನೀಡುತ್ತಿವೆ. ಉಭಯ ರಾಷ್ಟ್ರಗಳ ನಡುವೆ ತ್ವೇಷಮಯ ವಾತಾವರಣ ಇದೆ. ಭಾರತದ ಮುಂಚೂಣಿ ನೆಲೆಗಳತ್ತ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ ಎಂದು ಭಾರತ ಗುರುವಾರ ಹೇಳಿದೆ. ಉಭಯ ರಾಷ್ಟ್ರಗಳು ಸೇನಾ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ.

'ಭಾರತ-ಪಾಕ್ ಸಂಘರ್ಷ ಉಲ್ಬಣಗೊಂಡರೆ ಯಾರೂ ಗೆಲ್ಲುವುದಿಲ್ಲ'; ಬ್ರಿಟನ್ ಸಲಹೆಗೆ S Jaishankar ಖಡಕ್ ಪ್ರತಿಕ್ರಿಯೆ
ಮುಂದಿನ ದಾಳಿ ಯುದ್ಧದ ಕೃತ್ಯವೆಂದು ಪರಿಗಣಿಸುತ್ತೇವೆ
ಭಾರತದಲ್ಲಿ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ "ಯುದ್ಧ ಕೃತ್ಯ" ಎಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ಶನಿವಾರ ತಿಳಿಸಿವೆ.
ಈ ನಿರ್ಧಾರದೊಂದಿಗೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಯೋತ್ಪಾದಕ ಘಟನೆಗಳ ವಿರುದ್ಧ ಕೆಂಪು ಗೆರೆ (ರೆಡ್ ಲೈನ್)ಗಳನ್ನು ಎಳೆಯಲು ಪ್ರಯತ್ನಿಸುತ್ತಿದೆ ಮತ್ತು ಅಪರಾಧಿಗಳು ಮತ್ತು ಪಿತೂರಿಗಾರರಿಗೆ ದೃಢವಾಗಿ ಪ್ರತಿಕ್ರಿಯಿಸುವ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ, ಇದು ಭಾರತೀಯರನ್ನು ಗುರಿಯಾಗಿಸಿಕೊಂಡು ವಿವಿಧ ಭಯೋತ್ಪಾದಕ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಪಾಕಿಸ್ತಾನಕ್ಕೆ ಸಂದೇಶವೆಂದು ಪರಿಗಣಿಸಲಾಗಿದೆ.
"ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುವುದು ಎಂದು ಭಾರತ ಹೇಳಿದೆ. ಪಾಕಿಸ್ತಾನ ಎರಡು ದಿನಗಳ ಕಾಲ ಡ್ರೋನ್ ಮತ್ತು ಕ್ಷಿಪಣಿ ದಾಳಿಗೆ ಪ್ರಯತ್ನಿಸಿದ ನಂತರ ಭಾರತ ಸರ್ಕಾರ ಈ ಹೇಳಿಕೆ ನೀಡಿದ್ದು, ಪಾಕಿಸ್ತಾನದ ಡ್ರೋನ್ ದಾಳಿಯನ್ನು ಪ್ರಚೋದನಕಾರಿ ಕೃತ್ಯ ಎಂದು ವಿದೇಶಾಂಗ ಇಲಾಖೆ ಟೀಕಿಸಿದೆ.
‘ಗಡಿ ಪ್ರದೇಶಗಳಿಗೆ ಪಾಕಿಸ್ತಾನ ತನ್ನ ಸೇನೆಯನ್ನು ಕಳುಹಿಸುತ್ತಿದೆ’ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರೊಂದಿಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸೋಫಿಯಾ ಖುರೇಷಿ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


