ಪಾಕ್‌ನ ಬಲಿಷ್ಠ Fatah-II ಮತ್ತು Abdali ಬ್ಯಾಲಿಸ್ಟಿಕ್ ಕ್ಷಿಪಣಿ ಧ್ವಂಸ? ಭಾರತದ ಪರಾಕ್ರಮ; Video
ಭಾರತವು ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿ ಪಾಕಿಸ್ತಾನದಲ್ಲಿ ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿತು.

ನವದೆಹಲಿ: ಕಳೆದ ತಿಂಗಳು ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದಂತಹ ಪರಿಸ್ಥಿತಿ ಉದ್ಭವಿಸಿದೆ. ಈ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯರು ಬಲಿಯಾಗಿದ್ದರು. ಈ ಭಯೋತ್ಪಾದಕ ದಾಳಿಯನ್ನು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳು ನಡೆಸಿತ್ತು. ಈ ದಾಳಿಯ ನಂತರ, ಭಾರತವು ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿ ಪಾಕಿಸ್ತಾನದಲ್ಲಿ ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿತು. ಇದರಿಂದ ಕೆರಳಿದ ಪಾಕಿಸ್ತಾನಿ ಸೇನೆಯು ಕಳೆದ ಮೂರು ದಿನಗಳಿಂದ ಡ್ರೋನ್‌ಗಳು ಮತ್ತು ಕ್ಷಿಪಣಿಗಳಿಂದ ಭಾರತದ ಮೇಲೆ ನಿರಂತರವಾಗಿ ದಾಳಿ ಮಾಡಲು ಪ್ರಾರಂಭಿಸಿದೆ. ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಪಾಕಿಸ್ತಾನದ ಎಲ್ಲಾ ಯೋಜನೆಗಳನ್ನು ವಿಫಲಗೊಳಿಸಿತು ಮತ್ತು ಅವರ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸುತ್ತಿದೆ.
ಇದೀಗ ಪಾಕಿಸ್ತಾನ ಮೇ 10ರಂದು ಪಾಕಿಸ್ತಾನದ ಫತಾಹ್-2 ಹೈಪರ್ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹೊಡೆದುರುಳಿಸಿದೆ. ಪಾಕಿಸ್ತಾನ ಈ ಕ್ಷಿಪಣಿಯನ್ನು ಇರಾನ್‌ನಿಂದ ಖರೀದಿಸಿದೆ. ಇದರ ವ್ಯಾಪ್ತಿಯು 400 ಕಿಲೋಮೀಟರ್‌ಗಳವರೆಗೆ ಇದೆ. ಇದು ಫತಾಹ್-2 ಕ್ಷಿಪಣಿಯ ನವೀಕರಿಸಿದ ಆವೃತ್ತಿಯಾಗಿದ್ದು, ಇದು ಅತ್ಯಾಧುನಿಕ ಮಾರ್ಗದರ್ಶಿ ರಾಕೆಟ್‌ಗೆ ಹೋಲಿಸಬಹುದಾಗಿದೆ. ಈ ಕ್ಷಿಪಣಿಗೆ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯವಿದೆ. ಈ ಕ್ಷಿಪಣಿಯನ್ನು ದೆಹಲಿಯನ್ನು ಗುರಿಯಾಗಿಸಿ ಉಡಾಯಿಸಲಾಗಿತ್ತು. ಆದರೆ ಇದನ್ನು ಹರಿಯಾಣದ ಸಿರ್ಸಾ ಬಳಿ ಆಗಸದಲ್ಲೇ ಭಾರತೀಯ ರಕ್ಷಣಾ ವ್ಯವಸ್ಥೆ ಹೊಡೆದುರುಳಿಸಿದೆ.
ಮತ್ತೊಂದೆಡೆ ಅಬ್ದಾಲಿ ಕ್ಷಿಪಣಿಯನ್ನು ಪಾಕಿಸ್ತಾನ ಭಾರತದ ಮೇಲೆ ಪ್ರಯೋಗ ಮಾಡಿದೆ. ಪಾಕಿಸ್ತಾನದಲ್ಲಿ ಈ ಕ್ಷಿಪಣಿಯನ್ನು ಹತ್ಫ್-II ಎಂದೂ ಕರೆಯುತ್ತಾರೆ. ಇದು ಅಲ್ಪ-ಶ್ರೇಣಿಯ ಏರ್ ಟು ಏರ್ ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದೆ. ಪಾಕಿಸ್ತಾನದ ಖಂಡಾಂತರ ಕ್ಷಿಪಣಿ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾದ ಇದು ಪಾಕಿಸ್ತಾನ ಸೇನೆಯ ಕಾರ್ಯತಂತ್ರದ ಪಡೆಗಳಿಗೆ ಪ್ರಮುಖವಾದ ಕಾರ್ಯತಂತ್ರದ ಅಸ್ತ್ರವಾಗಿದೆ. ಇದನ್ನು ಪಾಕಿಸ್ತಾನ ಬಾಹ್ಯಾಕಾಶ ಸಂಶೋಧನಾ ಆಯೋಗ (SUPARCO) ಮತ್ತು ರಕ್ಷಣಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (DESTO) ಜಂಟಿಯಾಗಿ ಅಭಿವೃದ್ಧಿಪಡಿಸಿವೆ.
ಮೇ 9 ಮತ್ತು 10 ರ ರಾತ್ರಿ, ಪಾಕಿಸ್ತಾನವು ಡ್ರೋನ್‌ಗಳು ಮತ್ತು ಕ್ಷಿಪಣಿಗಳಿಂದ ಭಾರತದ ಮೇಲೆ ದಾಳಿ ಮಾಡಿತ್ತು. ಆದರೆ ಭಾರತವು ಎಲ್ಲಾ ದಾಳಿಗಳನ್ನು ಸಂಪೂರ್ಣವಾಗಿ ವಿಫಲಗೊಳಿಸಿತು. ಈ ದಾಳಿಗಳ ನಡುವೆ, ಪಾಕಿಸ್ತಾನದ ಮತ್ತೊಂದು ಕ್ಷಿಪಣಿಯ ಹೆಸರು ಬೆಳಕಿಗೆ ಬಂದಿದೆ. ಜೈಸಲ್ಮೇರ್‌ನಲ್ಲಿ ಭಾರತೀಯ ಸೇನೆಯು ಅಬ್ದಾಲಿ ಕ್ಷಿಪಣಿಯನ್ನು ಗಾಳಿಯಲ್ಲಿಯೇ ನಾಶಪಡಿಸಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಈ ದಾಳಿಯಲ್ಲಿ ಅಲ್ಪ ವ್ಯಾಪ್ತಿಯ ಕ್ಷಿಪಣಿಯನ್ನು ಬಳಸ ಧ್ವಂಸಗೈಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



