Operation Sindoor: ಪಾಕಿಸ್ತಾನ ವಾಯುನೆಲೆಗಳ ಮೇಲೆ ಭಾರತ ದಾಳಿ
ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ರೀತಿಯ ವಾಯು ಸಂಚಾರಕ್ಕಾಗಿ ಪಾಕಿಸ್ತಾನದ ವಾಯುಪ್ರದೇಶವನ್ನು ನಸುಕಿನ ಜಾವ 3.15 ರಿಂದ ಮಧ್ಯಾಹ್ನ 12 ರವರೆಗೆ ಮುಚ್ಚಲಾಗಿದೆ ಎಂದು ತಿಳಿಸಿದೆ.

ಇಸ್ಲಾಮಾಬಾದ್: ಇಂದು ಶನಿವಾರ ಮುಂಜಾನೆ ಪಾಕಿಸ್ತಾನದ ಮೂರು ವಾಯುನೆಲೆಗಳ ಮೇಲೆ ಭಾರತೀಯ ಕ್ಷಿಪಣಿ ಮತ್ತು ಡ್ರೋನ್‌ಗಳು ಗುರಿಯಾಗಿಸಿ ದಾಳಿ ನಡೆಸಿವೆ.
ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಇಸ್ಲಾಮಾಬಾದ್‌ನಲ್ಲಿ ಆತುರದಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನ ವಾಯುಪಡೆಯ ನೂರ್ ಖಾನ್ (ಚಕ್ಲಾಲಾ, ರಾವಲ್ಪಿಂಡಿ), ಮುರಿಯ್ (ಚಕ್ವಾಲ್) ಮತ್ತು ರಫೀಕಿ (ಜಾಂಗ್ ಜಿಲ್ಲೆಯ ಶೋರ್ಕೋಟ್) ವಾಯುನೆಲೆಗಳನ್ನು ಭಾರತ ಗುರಿಯಾಗಿಸಿ ದಾಳಿ ಮಾಡಿದೆ ಎಂದು ಹೇಳಿದ್ದಾರೆ.
ವಾಯುಪಡೆಯ ಎಲ್ಲಾ ಸ್ವತ್ತುಗಳು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ. ಭಾರತವು ತನ್ನ ಜೆಟ್ ಮೂಲಕ ಗಾಳಿಯಿಂದ ಮೇಲ್ಮೈಗೆ ಕ್ಷಿಪಣಿಗಳನ್ನು ಹಾರಿಸಿದೆ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಯು ಹಲವಾರು ಕ್ಷಿಪಣಿಗಳನ್ನು ತಡೆಹಿಡಿದಿದೆ ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೆ ಹೇಳಿಕೆ ನೀಡಿ ಹಠಾತ್ತನೆ ಕೊನೆಗೊಳಿಸಿದ್ದಾರೆ.
ನಿಮಿಷಗಳ ನಂತರ, ಪಾಕಿಸ್ತಾನ ಪ್ರತಿದಾಳಿ ನಡೆಸಿದೆ ಎಂದು ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಪಿಟಿವಿ ವರದಿ ಮಾಡಿದೆ. ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ರೀತಿಯ ವಾಯು ಸಂಚಾರಕ್ಕಾಗಿ ಪಾಕಿಸ್ತಾನದ ವಾಯುಪ್ರದೇಶವನ್ನು ನಸುಕಿನ ಜಾವ 3.15 ರಿಂದ ಮಧ್ಯಾಹ್ನ 12 ರವರೆಗೆ ಮುಚ್ಚಲಾಗಿದೆ ಎಂದು ತಿಳಿಸಿದೆ.
ಇಂದು ಮುಂಜಾನೆ ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಮೃತಪಟ್ಟು ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚುವರಿ ಉಪ ಆಯುಕ್ತ ರಾಜೌರಿ ರಾಜ್ ಕುಮಾರ್ ಥಾಪಾ ಮತ್ತು ಇಬ್ಬರು ಸಿಬ್ಬಂದಿಗಳು ರಾಜೌರಿ ಪಟ್ಟಣದಲ್ಲಿರುವ ಅವರ ನಿವಾಸಕ್ಕೆ ಫಿರಂಗಿ ಶೆಲ್ ಬಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು.
'ಅಧಿಕಾರಿಗಳ ಪ್ರಕಾರ, ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಾಪನೆಗಳ ಬಳಿ ಸ್ಫೋಟಗಳ ಸದ್ದು ಕೇಳಿಬಂದಿದೆ. ಸ್ಫೋಟಗಳ ಸದ್ದು ಕೇಳಿದ ತಕ್ಷಣ, ನಗರದಲ್ಲಿ ಸೈರನ್‌ಗಳು ಮೊಳಗಿದವು. ಕಾಶ್ಮೀರ ಕಣಿವೆಯ ಇತರ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಮಿಲಿಟರಿ ಸಂಘರ್ಷದ ಮಧ್ಯೆ, ಇಂದು ಬೆಳಗಿನ ಜಾವ ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯಲ್ಲಿ ಸ್ಫೋಟದಂತಹ ಶಬ್ದಗಳು ಕೇಳಿಬಂದವು. ನಸುಕಿನ ಜಾವ 5 ಗಂಟೆ ಸುಮಾರಿಗೆ ಸ್ಫೋಟದ ಶಬ್ದಗಳು ಕೇಳಿಬಂದವು. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



