ಭಾರತ-ಪಾಕ್ ನಾಯಕರು ಬುದ್ಧಿವಂತಿಕೆ ತೋರಿಸಿದ್ದಾರೆ, ವ್ಯಾಪಾರ-ವಹಿವಾಟು ಹೆಚ್ಚಿಸುತ್ತೇವೆ: ಡೊನಾಲ್ಡ್ ಟ್ರಂಪ್
ಪಾಕಿಸ್ತಾನವು ಕದನ ವಿರಾಮವನ್ನು ತೀವ್ರವಾಗಿ ಉಲ್ಲಂಘಿಸುತ್ತಿದೆ ಎಂದು ಭಾರತ ಆರೋಪಿಸಿದ ನಂತರ ಟ್ರಂಪ್ ಅವರ ಈ ಹೇಳಿಕೆ ಬಂದಿದೆ.

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಲು ತಯಾರಿರುವುದಾಗಿಯೂ ಹೇಳಿದ್ದಾರೆ.
ಪಾಕಿಸ್ತಾನವು ಕದನ ವಿರಾಮವನ್ನು ತೀವ್ರವಾಗಿ ಉಲ್ಲಂಘಿಸುತ್ತಿದೆ ಎಂದು ಭಾರತ ಆರೋಪಿಸಿದ ನಂತರ ಟ್ರಂಪ್ ಅವರ ಈ ಹೇಳಿಕೆ ಬಂದಿದೆ. ಕದನವಿರಾಮ ನಿನ್ನೆ ಶನಿವಾರ ಸಂಜೆ 5 ಗಂಟೆಯಿಂದ ಜಾರಿಗೆ ಬಂದಿದೆ.
ತಮ್ಮ ಸೋಷಿಯಲ್ ಮೀಡಿಯಾ ವೇದಿಕೆ 'ಟ್ರುತ್ ಸೋಷಿಯಲ್' ಮೂಲಕ ಹೊಸ ಪೋಸ್ಟ್ನಲ್ಲಿ, ಟ್ರಂಪ್ ಅವರು ಪ್ರಸ್ತುತ ಆಕ್ರಮಣವನ್ನು ನಿಲ್ಲಿಸುವ ಸಮಯ ಎಂದು ಅರ್ಥಮಾಡಿಕೊಂಡಿದ್ದಕ್ಕಾಗಿ ಭಾರತ ಮತ್ತು ಪಾಕಿಸ್ತಾನ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅವರ ಧೈರ್ಯಶಾಲಿ ಕ್ರಮಗಳಿಂದ ಇದು ಸಾಧ್ಯವಾಗಿದೆ ಎಂದು ಶ್ಲಾಘಿಸಿದ್ದಾರೆ.
ಹಲವರ ಸಾವು ಮತ್ತು ವಿನಾಶಕ್ಕೆ ಕಾರಣವಾಗಬಹುದಾದ ಪ್ರಸ್ತುತ ಆಕ್ರಮಣವನ್ನು ನಿಲ್ಲಿಸುವ ಸಮಯ ಬಂದಿದೆ ಎಂದು ಸಂಪೂರ್ಣವಾಗಿ ತಿಳಿದುಕೊಳ್ಳಲು ಮತ್ತು ಅರ್ಥಮಾಡಿಕೊಳ್ಳಲು ಭಾರತ ಮತ್ತು ಪಾಕಿಸ್ತಾನದ ಬಲವಾದ ಮತ್ತು ಅಚಲವಾದ ಶಕ್ತಿಶಾಲಿ ನಾಯಕತ್ವದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಲಕ್ಷಾಂತರ ಮುಗ್ಧ ಜನರು ಸಾಯಬಹುದಿತ್ತು! ನಿಮ್ಮ ಧೈರ್ಯಶಾಲಿ ಕ್ರಮಗಳಿಂದ ನಿಮ್ಮ ಪರಂಪರೆ ಬಹಳವಾಗಿ ವೃದ್ಧಿಯಾಗಿದೆ" ಎಂದು ಟ್ರಂಪ್ ಬರೆದಿದ್ದಾರೆ.
ಮಧ್ಯಸ್ಥಿಕೆ ವಹಿಸುವಲ್ಲಿ ಅಮೆರಿಕದ ಪಾತ್ರವನ್ನು ಉಲ್ಲೇಖಿಸಿದ ಟ್ರಂಪ್, ನಮ್ಮ ಆಡಳಿತವು ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಸುಂಕಗಳನ್ನು ವಿಧಿಸುತ್ತಲೇ ಇದ್ದರೂ, ಎರಡೂ ದೇಶಗಳೊಂದಿಗೆ ವ್ಯಾಪಾರವನ್ನು ಗಣನೀಯವಾಗಿ ಹೆಚ್ಚಿಸುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



