ದೇಶ

ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ, ಭಾರಿ ವಿಳಂಬ

ವಿಮಾನಯಾನ ಸಂಸ್ಥೆಯ ಭದ್ರತಾ ಅಧಿಕಾರಿಗೆ ತನ್ನ ಬಳಿ ಬಾಂಬ್ ಇದೆ ಎಂದು ತಿಳಿಸಿದ ನಂತರ ಆ ಪ್ರಯಾಣಿಕನನ್ನು ಬಂಧಿಸಲಾಯಿತು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ(ಎಎಐ) ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ, ಭಾರಿ ವಿಳಂಬ
ಇಂಡಿಗೋ ವಿಮಾನದ ಸಾಂದರ್ಭಿಕ ಚಿತ್ರ
Published On :

ಕೋಲ್ಕತ್ತಾ: ಖಾಸಗಿ ವಿಮಾನಯಾನ ಸಂಸ್ಥೆಯ ವಿಮಾನವೊಂದರಲ್ಲಿ ಮಂಗಳವಾರ ಮಧ್ಯಾಹ್ನ ಪ್ರಯಾಣಿಕರೊಬ್ಬರು ತನ್ನ ಬಳಿ ಬಾಂಬ್ ಇದೆ ಎಂದು ಹೇಳಿದ್ದು, ವಿಮಾನವನ್ನು ಕೋಲ್ಕತ್ತಾ ವಿಮಾನ ನಿಲ್ದಾಣದ ಐಸೋಲೇಷನ್ ಬೇಗೆ ತೆಗೆದುಕೊಂಡು ಹೋಗಿ ಸಂಪೂರ್ಣ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನಯಾನ ಸಂಸ್ಥೆಯ ಭದ್ರತಾ ಅಧಿಕಾರಿಗೆ ತನ್ನ ಬಳಿ ಬಾಂಬ್ ಇದೆ ಎಂದು ತಿಳಿಸಿದ ನಂತರ ಆ ಪ್ರಯಾಣಿಕನನ್ನು ಬಂಧಿಸಲಾಯಿತು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ(ಎಎಐ) ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇಂಫಾಲ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ 26 ವರ್ಷದ ಪ್ರಯಾಣಿಕ, ಸ್ಟೆಪ್ ಲ್ಯಾಡರ್ ಪಾಯಿಂಟ್ ಚೆಕ್ ಸಮಯದಲ್ಲಿ ಈ ಹೇಳಿಕೆ ನೀಡಿದ್ದಾರೆ. ಇದು ವಿಮಾನಯಾನ ಸಿಬ್ಬಂದಿ, ಪ್ರಯಾಣಿಕರು ವಿಮಾನ ಹತ್ತುವ ಮೊದಲು ಪರಿಶೀಲಿಸುವ ದ್ವಿತೀಯ ಹಂತದ ಭದ್ರತಾ ವಿಧಾನವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಂಧಿತ ಪ್ರಯಾಣಿಕ ಇಂಡಿಗೋ ವಿಮಾನದ ಮೂಲಕ ಕೋಲ್ಕತ್ತಾಗೆ ಬಂದಿದ್ದು, ಅದೇ ವಿಮಾನಯಾನ ಸಂಸ್ಥೆಯ ಮತ್ತೊಂದು ವಿಮಾನದಲ್ಲಿ ಮುಂಬೈಗೆ ತೆರಳಬೇಕಿತ್ತು.

ಕೋಲ್ಕತ್ತಾದಿಂದ ಮುಂಬೈಗೆ ಪ್ರಯಾಣಿಸಬೇಕಿದ್ದ ಒಟ್ಟು 186 ಪ್ರಯಾಣಿಕರಲ್ಲಿ 179 ಜನರು ಈಗಾಗಲೇ ಹತ್ತಿದ್ದರು. ಆದರೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿಮಾನವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಯಿತು ಎಂದು ಅಧಿಕಾರಿ ಹೇಳಿದ್ದಾರೆ.

ವಿಮಾನವು ಮಧ್ಯಾಹ್ನ 1.30 ಕ್ಕೆ ಮುಂಬೈಗೆ ಹೊರಡಬೇಕಿತ್ತು. ಆದರೆ ವಿಮಾನವನ್ನು ಖಾಲಿ ಮಾಡಿ ಸಂಪೂರ್ಣ ತಪಾಸಣೆಗಾಗಿ ಐಸೋಲೇಷನ್ ಬೇಗೆ ತೆಗೆದುಕೊಂಡು ಹೋಗಲಾಯಿತು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.