ದೇಶ

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ: ಬಂಧಿತ BSF ಯೋಧ ಕೊನೆಗೂ ಬಿಡುಗಡೆ! Video

ಫಿರೋಜ್‌ಪುರ ಸೆಕ್ಟರ್‌ನಲ್ಲಿ ಆಕಸ್ಮಿಕವಾಗಿ ಎಲ್ಒಸಿಯ ಶೂನ್ಯ ರೇಖೆಯನ್ನು ದಾಟಿದ ನಂತರ ಏಪ್ರಿಲ್ 23 ರಂದು ಶಾ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದರು.

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ: ಬಂಧಿತ BSF ಯೋಧ ಕೊನೆಗೂ ಬಿಡುಗಡೆ! Video
ಭಾರತಕ್ಕೆ ಮರಳಿದ ಯೋಧ ಪಿಕೆ ಶಾ
Published On :

ನವದೆಹಲಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ.

ಹೌದು.. ಈ ಹಿಂದೆ ಅಂದರೆ ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಈಗಾಗಲೇ ಯೋಧ ಪಿಕೆ ಶಾನನ್ನು ಭಾರತದ ವಶಕ್ಕೆ ನೀಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಪೂರ್ಣಮ್ ಕುಮಾರ್ ಶಾ ಅವರನ್ನು ಅಮೃತಸರದ ಅಟ್ಟಾರಿಯಲ್ಲಿರುವ ಜಂಟಿ ಚೆಕ್ ಪೋಸ್ಟ್ ಮೂಲಕ ಬೆಳಿಗ್ಗೆ 10.30 ರ ಸುಮಾರಿಗೆ ಹಸ್ತಾಂತರಿಸಲಾಯಿತು ಎಂದು ಬಿಎಸ್ಎಫ್ ತಿಳಿಸಿದೆ. ಏಪ್ರಿಲ್ 23, 2025 ರಿಂದ ಪಾಕಿಸ್ತಾನ ರೇಂಜರ್‌ಗಳ ವಶದಲ್ಲಿದ್ದ ಜವಾನ್ ಪಿಕೆ ಶಾ ಅವರನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬುಧವಾರ ತಿಳಿಸಿದೆ.

ಅಧಿಕಾರಿಗಳ ಪ್ರಕಾರ, ಫಿರೋಜ್‌ಪುರ ಸೆಕ್ಟರ್‌ನಲ್ಲಿ ಆಕಸ್ಮಿಕವಾಗಿ ಎಲ್ಒಸಿಯ ಶೂನ್ಯ ರೇಖೆಯನ್ನು ದಾಟಿದ ನಂತರ ಏಪ್ರಿಲ್ 23 ರಂದು ಶಾ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದರು. ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರು ಸಾವನ್ನಪ್ಪಿದ ವಿನಾಶಕಾರಿ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಅವರನ್ನು ವಶಕ್ಕೆ ಪಡೆಯಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.