ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಅಮಾನತು ಮುಂದುವರಿಯಲಿದೆ: ಕೇಂದ್ರ ಸರ್ಕಾರ
"ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ತ್ಯಜಿಸುವವರೆಗೆ ಪ್ರಮುಖ ನೀರು ಹಂಚಿಕೆ ಒಪ್ಪಂದವನ್ನು ಅಮಾನತುಗೊಳಿಸಲಾಗುತ್ತದೆ" ಎಂದು ಮುಖರ್ಜಿ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ನವದೆಹಲಿ: "ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಬದಲಾಯಿಸಲಾಗದಂತೆ ತ್ಯಜಿಸುವವರೆಗೆ "ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರಿಯಲಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯವು ಕ್ಯಾಬಿನೆಟ್ ಕಾರ್ಯದರ್ಶಿಗೆ ತಿಳಿಸಿದೆ.
ಕ್ಯಾಬಿನೆಟ್ ಕಾರ್ಯದರ್ಶಿ ಟಿವಿ ಸೋಮನಾಥನ್ ಅವರಿಗೆ ಮಂಗಳವಾರ ನೀಡಿದ ಮಾಸಿಕ ವರದಿಯಲ್ಲಿ, ಜಲಶಕ್ತಿ ಸಚಿವಾಲಯದ ಅಡಿಯಲ್ಲಿ ಬರುವ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆಯ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ "ಪಾಕಿಸ್ತಾನ ಪ್ರಾಯೋಜಿತ" ಭಯೋತ್ಪಾದಕ ದಾಳಿಯ ನಂತರ "ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಲಾಗಿದ್ದು, ಅದು ಮುಂದುವರೆಯಲಿದೆ" ಎಂದು ಹೇಳಿದ್ದಾರೆ.
"ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಬದಲಾಯಿಸಲಾಗದಂತೆ ತ್ಯಜಿಸುವವರೆಗೆ ಪ್ರಮುಖ ನೀರು ಹಂಚಿಕೆ ಒಪ್ಪಂದವನ್ನು ಅಮಾನತುಗೊಳಿಸಲಾಗುತ್ತದೆ" ಎಂದು ಮುಖರ್ಜಿ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.
1960 ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆ ವಹಿಸಿದ ಸಿಂಧೂ ಜಲ ಒಪ್ಪಂದ(IWT) ಭಾರತ ಮತ್ತು ಪಾಕಿಸ್ತಾನದ ನಡುವೆ ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರಿನ ಹಂಚಿಕೆ ಮತ್ತು ಬಳಕೆಯನ್ನು ನಿಯಂತ್ರಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



