ಭಾರತ-ಪಾಕಿಸ್ತಾನ ಕದನ ವಿರಾಮ ಮುಂದುವರಿಯಲಿದೆ: ಸೇನೆ
ಭಾನುವಾರ ಉಭಯ ದೇಶಗಳ ಡಿಜಿಎಂಒಗಳ ನಡುವೆ ಯಾವುದೇ ಹೊಸ ಮಾತುಕತೆ ನಿಗದಿಯಾಗಿಲ್ಲ ಎಂದೂ ಇದೇ ವೇಳೆ ಸ್ಪಷ್ಟಪಡಿಸಿದರು.

ನವದೆಹಲಿ: ಮೇ 12 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಕದನ ವಿರಾಮ ಒಪ್ಪಂದ ಮುಂದುವರೆಯಲಿದೆ ಎಂದು ಸೇನಾ ಹಿರಿಯ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.
ಕದನ ವಿರಾಮ ತಾತ್ಕಾಲಿಕವಾಗಿದ್ದು, ಕೊನೆಗೊಳ್ಳುವ ನಿರೀಕ್ಷೆಯಿದೆ ಎಂಬ ಊಹಾಪೋಹಗಳು ಕುರಿತು ಪ್ರತಿಕ್ರಿಯೆ ನೀಡಿರುವ ಸೇನಾಧಿಕಾರಿ, ಡಿಜಿಎಂಒಗಳ (ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು) ಮಾತುಕತೆ ಸಮಯದಲ್ಲಿ ಒಪ್ಪಿಕೊಂಡ ಯುದ್ಧ ಕುರಿತ ನಿಲುವಿಗೆ ಯಾವುದೇ ಮುಕ್ತಾಯ ದಿನಾಂಕವಿಲ್ಲ ಎಂದು ಹೇಳಿದರು.
ಭಾನುವಾರ ಉಭಯ ದೇಶಗಳ ಡಿಜಿಎಂಒಗಳ ನಡುವೆ ಯಾವುದೇ ಹೊಸ ಮಾತುಕತೆ ನಿಗದಿಯಾಗಿಲ್ಲ ಎಂದೂ ಇದೇ ವೇಳೆ ಸ್ಪಷ್ಟಪಡಿಸಿದರು.
ಮೇ 12 ರಂದು ಹೇಳಿಕೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳ ಮೇಲಿನ ಕಾರ್ಯಾಚರಣೆಯನ್ನು ಸದ್ಯಕ್ಕಷ್ಟೇ ನಿಲ್ಲಿಸಿದ್ದು, ನೆರೆಯ ರಾಷ್ಟ್ರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದ್ದರು.
ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ನಮ್ಮ ದಾಳಿಯನ್ನು ಸದ್ಯಕ್ಕಷ್ಟೇ ನಿಲ್ಲಿಸಿದ್ದೇವೆ. ನೆರೆಯ ರಾಷ್ಟ್ರದ ಯಾವುದೇ ಪರಮಾಣು ಬೆದರಿಕೆಗಳು ಅಥವಾ ಬ್ಲ್ಯಾಕ್‌ಮೇಲಿಂಗ್ ಅನ್ನು ಸಹಿಸಲಾಗುವುದಿಲ್ಲ, ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ಸಹಿಸುವುದಿಲ್ಲ. ಇದಕ್ಕೆ ಸೂಕ್ತ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



