ಸೋಲಾಪುರ: ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ; ಮಾಲೀಕ, ಅವರ ಮೊಮ್ಮಗ ಸೇರಿ 8 ಮಂದಿ ಸಜೀವ ದಹನ
ಸೋಲಾಪುರ ಎಂಐಡಿಸಿಯ ಅಕ್ಕಲ್‌ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಜವಳಿ ಮಿಲ್ಸ್‌ನಲ್ಲಿ ಇಂದು ಬೆಳಗಿನ ಜಾವ 3:45 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಮುಂಬೈ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕಾರ್ಖಾನೆ ಮಾಲೀಕ, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸೋಲಾಪುರ ಎಂಐಡಿಸಿಯ ಅಕ್ಕಲ್‌ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಜವಳಿ ಮಿಲ್ಸ್‌ನಲ್ಲಿ ಇಂದು ಬೆಳಗಿನ ಜಾವ 3:45 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.
ಅಗ್ನಿ ಅವಘಡದಲ್ಲಿ ಕಾರ್ಖಾನೆಯ ಮಾಲೀಕ ಹಾಜಿ ಉಸ್ಮಾನ್ ಹಸನ್‌ಭಾಯ್ ಮನ್ಸೂರಿ, ಅವರ ಒಂದೂವರೆ ವರ್ಷದ ಮೊಮ್ಮಗ ಸೇರಿದಂತೆ ಅವರ ಕುಟುಂಬದ ಮೂವರು ಸದಸ್ಯರು ಮತ್ತು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಅದನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗೆ ಐದರಿಂದ ಆರು ಗಂಟೆಗಳು ಬೇಕಾಯಿತು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



