Assam: ದೇಶ ವಿರೋಧಿ ಚಟುವಟಿಕೆ; ಪಹಲ್ಗಾಮ್ ದಾಳಿ ಬಳಿಕ ಇಲ್ಲಿಯವರೆಗೆ 71 ಮಂದಿ ಬಂಧನ!
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ, ಕೊಕ್ರಜಾರ್, ಗೋಲ್‌ಪಾರಾ ಮತ್ತು ದಕ್ಷಿಣ ಸಲ್ಮಾರಾ-ಮಂಕಚಾರ್ ಜಿಲ್ಲೆಗಳಿಂದ ತಲಾ ಒಬ್ಬರನ್ನು ಬಂಧಿಸಲಾಗಿದೆ.

ಗುವಾಹಟಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಅಸ್ಸಾಂನಲ್ಲಿ "ದೇಶ ವಿರೋಧಿ" ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಮೇಲೆ ಇನ್ನೂ ಮೂವರನ್ನು ಬಂಧಿಸಲಾಗಿದೆ.
ಇದರೊಂದಿಗೆ ಇಂತಹ ಆರೋಪದಲ್ಲಿ ಇಲ್ಲಿಯವರೆಗೂ 71 ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ, ಕೊಕ್ರಜಾರ್, ಗೋಲ್‌ಪಾರಾ ಮತ್ತು ದಕ್ಷಿಣ ಸಲ್ಮಾರಾ-ಮಂಕಚಾರ್ ಜಿಲ್ಲೆಗಳಿಂದ ತಲಾ ಒಬ್ಬರನ್ನು ಬಂಧಿಸಲಾಗಿದೆ. 71 ದೇಶವಿರೋಧಿಗಳು ಈಗ ಕಂಬಿಗಳ ಹಿಂದೆ ಇದ್ದಾರೆ! ಅಸ್ಸಾಂ ಪೊಲೀಸರು ಡಿಜಿಟಲ್ ವಲಯದ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಪಹಲ್ಗಾಮ್ ಭಯೋತ್ಪಾದಕರ ದಾಳಿ ವಿಚಾರದಲ್ಲಿ ಪಾಕಿಸ್ತಾನವನ್ನು ಸಮರ್ಥಿಸಿಕೊಂಡಿದ್ದ ಪ್ರತಿಪಕ್ಷ ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಅವರನ್ನು ದೇಶದ್ರೋಹ ಆರೋಪದ ಮೇಲೆ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜಾಮೀನು ಪಡೆದ ನಂತರ, ಇಸ್ಲಾಂ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಯಿತು.
ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯ ನಂತರ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮೇ 2 ರಂದು ಶರ್ಮಾ ಎಚ್ಚರಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



