ದೇಶ

ಬಿಜೆಪಿ ಮಾಜಿ ಸಂಸದ ಜನ ಸುರಾಜ್ ಪಕ್ಷದ ಮೊದಲ ರಾಷ್ಟ್ರೀಯ ಅಧ್ಯಕ್ಷ: ಪ್ರಶಾಂತ್ ಕಿಶೋರ್ ಘೋಷಣೆ

ಕಳೆದ ವರ್ಷ ಅಕ್ಟೋಬರ್ 2 ರಂದು ಸ್ಥಾಪನೆಯಾದ ಜನ ಸುರಾಜ್ ಪಕ್ಷವು ಅಂದಿನಿಂದ ಪೂರ್ಣ ಪ್ರಮಾಣದ ಅಧ್ಯಕ್ಷರಿಲ್ಲದೆ ಕಾರ್ಯನಿರ್ವಹಿಸುತ್ತಿತ್ತು.

ಬಿಜೆಪಿ ಮಾಜಿ ಸಂಸದ ಜನ ಸುರಾಜ್ ಪಕ್ಷದ ಮೊದಲ ರಾಷ್ಟ್ರೀಯ ಅಧ್ಯಕ್ಷ: ಪ್ರಶಾಂತ್ ಕಿಶೋರ್ ಘೋಷಣೆ
ಪ್ರಶಾಂತ್ ಕಿಶೋರ್
Published On :

ಪಾಟ್ನಾ: ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಬಿಜೆಪಿ ಮಾಜಿ ಸಂಸದ ಉದಯ್ ಸಿಂಗ್ ಅವರನ್ನು ತಮ್ಮ ಪಕ್ಷದ ಮೊದಲ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಸೋಮವಾರ ಘೋಷಿಸಿದರು.

ಇಂದು ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಿಶೋರ್, ಉದಯ್ ಸಿಂಗ್ ಮತ್ತು ಆರ್‌ಸಿಪಿ ಸಿಂಗ್ ಅವರು ಭಾನುವಾರ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರಿಗೆ ಸಂಘಟನೆಯನ್ನು ನಡೆಸುವ ಜವಾಬ್ದಾರಿಯನ್ನು ವಹಿಸಿದ್ದೇನೆ. ನಾನು ಇನ್ನುಮುಂದೆ ಸಾರ್ವಜನಿಕ ಸಂಪರ್ಕದತ್ತ ಗಮನಹರಿಸುತ್ತೇನೆ ಎಂದು ಹೇಳಿದರು.

"ನಾನು ಈಗ ನಾಳೆಯಿಂದ ಬಿಹಾರದಲ್ಲಿ ನನ್ನ ಪಾದಯಾತ್ರೆಯನ್ನು ಪುನರಾರಂಭಿಸಬಹುದು" ಎಂದು ಪ್ರಶಾಂತ್ ಕಿಶೋರ್ ತಿಳಿಸಿದರು.

ಕಳೆದ ವರ್ಷ ಅಕ್ಟೋಬರ್ 2 ರಂದು ಸ್ಥಾಪನೆಯಾದ ಜನ ಸುರಾಜ್ ಪಕ್ಷವು ಅಂದಿನಿಂದ ಪೂರ್ಣ ಪ್ರಮಾಣದ ಅಧ್ಯಕ್ಷರಿಲ್ಲದೆ ಕಾರ್ಯನಿರ್ವಹಿಸುತ್ತಿತ್ತು.

ಕಿಶೋರ್ ಅವರು ತಾವು ಯಾವುದೇ ಹುದ್ದೆಯನ್ನು ಹೊಂದುವುದಿಲ್ಲ ಎಂದು ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಪಕ್ಷ ಸ್ಥಾಪನೆಯಾದ ಕೂಡಲೇ ಮಾಜಿ ಐಪಿಎಸ್ ಅಧಿಕಾರಿ ಮನೋಜ್ ಭಾರ್ತಿ ಅವರನ್ನು "ಕಾರ್ಯಾಧ್ಯಕ್ಷರಾಗಿ" ನೇಮಕ ಮಾಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.