Chhattisgarh: ನಾರಾಯಣ್ ಪುರ್-ಬಿಜಾಪುರ್ ಗಡಿಯಲ್ಲಿ ಗುಂಡಿನ ಚಕಮಕಿ; 27 ನಕ್ಸಲೀಯರು ಹತ್ಯೆ
ರಾಜ್ಯ ಪೊಲೀಸರು ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್‌ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢದ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 27 ನಕ್ಸಲರು ಮೃತಪಟ್ಟಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಪೊಲೀಸರ ಬೆಂಬಲಿಗ ಮೃತಪಟ್ಟಿದ್ದಾರೆ ಮತ್ತು ಒಬ್ಬರು ಪೊಲೀಸರಿಗೆ ಗಾಯವಾಗಿದೆ ಎಂದು ಪೊಲೀಸರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ರಾಜ್ಯ ಪೊಲೀಸರು ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್‌ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾರಾಯಣ್ ಪುರ, ಬಿಜಾಪುರ್, ದಂತೇವಾಡ ಮತ್ತು ಕಾಂಕೇರ್ ಜಿಲ್ಲೆಗಳಿಂದ ಜಿಲ್ಲಾ ಮೀಸಲು ಪಡೆ (DRG) ಜಂಟಿ ತಂಡಗಳ ಮೇಲೆ ಶಸ್ತ್ರಸಜ್ಜಿತ ಮಾವೋವಾದಿಗಳು ಹೊಂಚುದಾಳಿ ನಡೆಸಿದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು.
ಮಾವೋವಾದಿಗಳ 'ಮ್ಯಾಡ್' ವಿಭಾಗದ ಹಿರಿಯ ಕಾರ್ಯಕರ್ತರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಸಿಕ್ಕಿ, ಭದ್ರತಾ ಪಡೆಗಳು ಪ್ರಸಿದ್ಧ ನಕ್ಸಲೀಯ ಭದ್ರಕೋಟೆಯಾದ ಅಭುಜ್‌ಮದ್ ಪ್ರದೇಶದೊಳಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.
ನಮ್ಮ ತಂಡಗಳು ನಕ್ಸಲರ ಅಡಗುತಾಣವನ್ನು ಸಮೀಪಿಸುತ್ತಿದ್ದಂತೆ ಮನಬಂದಂತೆ ಗುಂಡು ಹಾರಿಸಲು ಆರಂಭಿಸಿದರು. ಪ್ರತೀಕಾರದ ಕ್ರಮದಲ್ಲಿ, 26 ಕ್ಕೂ ಹೆಚ್ಚು ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇಂದು ನಸುಕಿನ ಜಾವ ಆರಂಭವಾದ ಎನ್‌ಕೌಂಟರ್ ಇನ್ನೂ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



